ترجمهٔ معانی قرآن کریم - الترجمة الكنادية - حمزة بتور * - لیست ترجمه ها

XML CSV Excel API
Please review the Terms and Policies

ترجمهٔ معانی آیه: (95) سوره: سوره مائده
یٰۤاَیُّهَا الَّذِیْنَ اٰمَنُوْا لَا تَقْتُلُوا الصَّیْدَ وَاَنْتُمْ حُرُمٌ ؕ— وَمَنْ قَتَلَهٗ مِنْكُمْ مُّتَعَمِّدًا فَجَزَآءٌ مِّثْلُ مَا قَتَلَ مِنَ النَّعَمِ یَحْكُمُ بِهٖ ذَوَا عَدْلٍ مِّنْكُمْ هَدْیًا بٰلِغَ الْكَعْبَةِ اَوْ كَفَّارَةٌ طَعَامُ مَسٰكِیْنَ اَوْ عَدْلُ ذٰلِكَ صِیَامًا لِّیَذُوْقَ وَبَالَ اَمْرِهٖ ؕ— عَفَا اللّٰهُ عَمَّا سَلَفَ ؕ— وَمَنْ عَادَ فَیَنْتَقِمُ اللّٰهُ مِنْهُ ؕ— وَاللّٰهُ عَزِیْزٌ ذُو انْتِقَامٍ ۟
ಓ ಸತ್ಯವಿಶ್ವಾಸಿಗಳೇ! ನೀವು ಇಹ್ರಾಮ್‍ನಲ್ಲಿರುವಾಗ ಬೇಟೆಯಾಡಿ ಪ್ರಾಣಿಯನ್ನು ಕೊಲ್ಲಬೇಡಿ. ನಿಮ್ಮಲ್ಲಿ ಯಾರಾದರೂ ಉದ್ದೇಶಪೂರ್ವಕ ಬೇಟೆಯಾಡಿ ಪ್ರಾಣಿಯನ್ನು ಕೊಂದರೆ, ಅದಕ್ಕಿರುವ ಪರಿಹಾರವು ಅವನು ಕೊಂದ ಮೃಗವನ್ನು ಹೋಲುತ್ತದೆಯೆಂದು ಇಬ್ಬರು ನ್ಯಾಯಸಮ್ಮತ ಜನರು ತೀರ್ಪು ನೀಡುವ ಪ್ರಾಣಿಯನ್ನು ಕಅಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪುವ ಬಲಿಮೃಗವಾಗಿ ನೀಡುವುದು; ಅಥವಾ ಅದಕ್ಕೆ ಪರಿಹಾರವಾಗಿ ಬಡವರಿಗೆ ಅನ್ನದಾನ ಮಾಡುವುದು; ಅಥವಾ ಅದಕ್ಕೆ ಸಮಾನವಾಗುವಷ್ಟು ಸಂಖ್ಯೆಯ ಉಪವಾಸ ಆಚರಿಸುವುದು.[1] ಅದು ಅವನು ಮಾಡಿದ ಕರ್ಮದ ಫಲವನ್ನು ಅವನು ಅನುಭವಿಸಲಿಕ್ಕಾಗಿ. ಈ ಹಿಂದೆ ಸಂಭವಿಸಿದ ತಪ್ಪುಗಳನ್ನು ಅಲ್ಲಾಹು ಕ್ಷಮಿಸಿದ್ದಾನೆ. ಆದರೆ ಯಾರಾದರೂ ಅದನ್ನು ಪುನರಾವರ್ತಿಸಿದರೆ, ಅಲ್ಲಾಹು ಅವನಿಂದ ಪ್ರತೀಕಾರವನ್ನು ಪಡೆಯುವನು. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ.
[1] ಇಹ್ರಾಮ್‌ನಲ್ಲಿರುವಾಗ ಉದ್ದೇಶಪೂರ್ವಕ ಬೇಟೆಯಾಡಿದರೆ, ಅದಕ್ಕೆ ನೀಡಬೇಕಾದ ಪರಿಹಾರವೇನೆಂದರೆ, ಕೊಂದ ಪ್ರಾಣಿಗೆ ಸಮಾನವೆಂದು ಇಬ್ಬರು ನ್ಯಾಯಸಮ್ಮತ ವ್ಯಕ್ತಿಗಳು ತೀರ್ಪು ನೀಡುವ ಜಾನುವಾರನ್ನು (ಕುರಿ, ಹಸು, ಒಂಟೆ) ಬಲಿ ನೀಡಿ ಹರಮ್‌ನಲ್ಲಿರುವ ಬಡವರಿಗೆ ಹಂಚುವುದು. ಸಮಾನವಾದ ಜಾನುವಾರು ಸಿಗದಿದ್ದರೆ, ಆ ಜಾನುವಾರಿನ ಮೌಲ್ಯದ ಆಹಾರವನ್ನು ಒಬ್ಬ ಬಡವನಿಗೆ ಅರ್ಧ ಸಾಅ್ ಎಂಬಂತೆ ದಾನ ಮಾಡುವುದು. ಅಥವಾ ಪ್ರತಿ ಅರ್ಧ ಸಾಅ್‌ಗೆ ಒಂದು ಉಪವಾಸ ಎಂಬಂತೆ ಉಪವಾಸ ಆಚರಿಸುವುದು.
تفسیرهای عربی:
 
ترجمهٔ معانی آیه: (95) سوره: سوره مائده
فهرست سوره ها شماره صفحه
 
ترجمهٔ معانی قرآن کریم - الترجمة الكنادية - حمزة بتور - لیست ترجمه ها

ترجمة معاني القرآن الكريم إلى اللغة الكنادية ترجمها محمد حمزة بتور.

بستن