Check out the new design

Fassarar Ma'anonin Alqura'ni - Fassarar Kanadiy - Hamza Batur * - Teburin Bayani kan wasu Fassarori

PDF XML CSV Excel API
Please review the Terms and Policies

Fassarar Ma'anoni Sura: Al'a'raf   Aya:
اِنَّ وَلِیِّ اللّٰهُ الَّذِیْ نَزَّلَ الْكِتٰبَ ۖؗ— وَهُوَ یَتَوَلَّی الصّٰلِحِیْنَ ۟
ನಿಶ್ಚಯವಾಗಿಯೂ ಈ ಗ್ರಂಥವನ್ನು ಅವತೀರ್ಣಗೊಳಿಸಿದ ಅಲ್ಲಾಹನೇ ನನ್ನ ರಕ್ಷಕ. ಅವನು ನೀತಿವಂತರನ್ನು ಸಂರಕ್ಷಿಸುವ ಹೊಣೆಯನ್ನು ವಹಿಸಿಕೊಂಡಿದ್ದಾನೆ.
Tafsiran larabci:
وَالَّذِیْنَ تَدْعُوْنَ مِنْ دُوْنِهٖ لَا یَسْتَطِیْعُوْنَ نَصْرَكُمْ وَلَاۤ اَنْفُسَهُمْ یَنْصُرُوْنَ ۟
ನೀವು ಅವನನ್ನು (ಅಲ್ಲಾಹನನ್ನು) ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತೀರೋ—ನಿಮಗೆ ಸಹಾಯ ಮಾಡಲು ಅವರಿಗೆ ಸಾಧ್ಯವಿಲ್ಲ. ಸ್ವಯಂ ಅವರಿಗೂ ಅವರು ಸಹಾಯ ಮಾಡುವುದಿಲ್ಲ.
Tafsiran larabci:
وَاِنْ تَدْعُوْهُمْ اِلَی الْهُدٰی لَا یَسْمَعُوْا ؕ— وَتَرٰىهُمْ یَنْظُرُوْنَ اِلَیْكَ وَهُمْ لَا یُبْصِرُوْنَ ۟
ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ಅದನ್ನು ಕೇಳುವುದಿಲ್ಲ. ಅವರು ನಿಮ್ಮನ್ನು ನೋಡುತ್ತಿರುವಂತೆ ನಿಮಗೆ ಕಾಣಬಹುದು. ಆದರೆ ಅವರು ನೋಡುವುದಿಲ್ಲ.
Tafsiran larabci:
خُذِ الْعَفْوَ وَاْمُرْ بِالْعُرْفِ وَاَعْرِضْ عَنِ الْجٰهِلِیْنَ ۟
(ಜನರೊಡನೆ) ಸೌಮ್ಯವಾಗಿ ವರ್ತಿಸಿರಿ, ಒಳಿತನ್ನು ಆದೇಶಿಸಿರಿ ಮತ್ತು ಅವಿವೇಕಿಗಳಿಂದ ದೂರವಿರಿ.
Tafsiran larabci:
وَاِمَّا یَنْزَغَنَّكَ مِنَ الشَّیْطٰنِ نَزْغٌ فَاسْتَعِذْ بِاللّٰهِ ؕ— اِنَّهٗ سَمِیْعٌ عَلِیْمٌ ۟
ನಿಮಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Tafsiran larabci:
اِنَّ الَّذِیْنَ اتَّقَوْا اِذَا مَسَّهُمْ طٰٓىِٕفٌ مِّنَ الشَّیْطٰنِ تَذَكَّرُوْا فَاِذَا هُمْ مُّبْصِرُوْنَ ۟ۚ
ನಿಶ್ಚಯವಾಗಿಯೂ ದೇವಭಯವುಳ್ಳವರಿಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ, ಅವರು ಅಲ್ಲಾಹನನ್ನು ಸ್ಮರಿಸುತ್ತಾರೆ. ಆಗ ಅವರು ಒಳದೃಷ್ಟಿಯುಳ್ಳವರಾಗುತ್ತಾರೆ.
Tafsiran larabci:
وَاِخْوَانُهُمْ یَمُدُّوْنَهُمْ فِی الْغَیِّ ثُمَّ لَا یُقْصِرُوْنَ ۟
ಅವರು (ಶೈತಾನರು) ಅವರ ಸಹೋದರರನ್ನು ದುರ್ಮಾರ್ಗದಲ್ಲಿ ಬಿಟ್ಟುಬಿಡುತ್ತಾರೆ. ಅವರು ಅದರಲ್ಲಿ ಯಾವುದೇ ಅಭಾವ ಮಾಡುವುದಿಲ್ಲ.
Tafsiran larabci:
وَاِذَا لَمْ تَاْتِهِمْ بِاٰیَةٍ قَالُوْا لَوْلَا اجْتَبَیْتَهَا ؕ— قُلْ اِنَّمَاۤ اَتَّبِعُ مَا یُوْحٰۤی اِلَیَّ مِنْ رَّبِّیْ ۚ— هٰذَا بَصَآىِٕرُ مِنْ رَّبِّكُمْ وَهُدًی وَّرَحْمَةٌ لِّقَوْمٍ یُّؤْمِنُوْنَ ۟
ನೀವು ಅವರಿಗೆ ಒಂದು ದೃಷ್ಟಾಂತವನ್ನು ತಂದು ತೋರಿಸದಿದ್ದರೆ, ಅವರು ಹೇಳುತ್ತಾರೆ: “ನೀವೇ ಅದನ್ನು ರಚಿಸಿ ತರಬಾರದೇ?” ಹೇಳಿರಿ: “ನನ್ನ ಪರಿಪಾಲಕನಿಂದ (ಅಲ್ಲಾಹನಿಂದ) ಬರುವ ದೇವವಾಣಿಗಳನ್ನು ಮಾತ್ರ ನಾನು ಅನುಸರಿಸುತ್ತೇನೆ. ಇದು (ಕುರ್‌ಆನ್) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಕಣ್ತೆರೆಸುವ ಸಾಕ್ಷ್ಯಾಧಾರವಾಗಿದೆ ಮತ್ತು ವಿಶ್ವಾಸವಿಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಾಗಿದೆ.”
Tafsiran larabci:
وَاِذَا قُرِئَ الْقُرْاٰنُ فَاسْتَمِعُوْا لَهٗ وَاَنْصِتُوْا لَعَلَّكُمْ تُرْحَمُوْنَ ۟
ಕುರ್‌ಆನ್ ಪಠಿಸಲಾಗುವಾಗ ಅದನ್ನು ಕಿವಿಗೊಟ್ಟು ಕೇಳಿರಿ ಮತ್ತು ಮೌನವಾಗಿರಿ. ನಿಮಗೆ ದಯೆ ತೋರಲಾಗುವುದಕ್ಕಾಗಿ.
Tafsiran larabci:
وَاذْكُرْ رَّبَّكَ فِیْ نَفْسِكَ تَضَرُّعًا وَّخِیْفَةً وَّدُوْنَ الْجَهْرِ مِنَ الْقَوْلِ بِالْغُدُوِّ وَالْاٰصَالِ وَلَا تَكُنْ مِّنَ الْغٰفِلِیْنَ ۟
ವಿನಯ ಮತ್ತು ಭಯದಿಂದ ಧ್ವನಿಯನ್ನು ತಗ್ಗಿಸಿ ಮುಂಜಾನೆ ಮತ್ತು ಸಂಜೆ ನೀವು ನಿಮ್ಮ ಮನಸ್ಸಿನಲ್ಲೇ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ಮರಿಸಿರಿ. ನೀವು ನಿರ್ಲಕ್ಷ್ಯರಾಗಿರುವವರಲ್ಲಿ ಸೇರಬೇಡಿ.
Tafsiran larabci:
اِنَّ الَّذِیْنَ عِنْدَ رَبِّكَ لَا یَسْتَكْبِرُوْنَ عَنْ عِبَادَتِهٖ وَیُسَبِّحُوْنَهٗ وَلَهٗ یَسْجُدُوْنَ ۟
ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಯಿರುವವರು (ದೇವದೂತರು) ಅವನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವುದಿಲ್ಲ. ಅವರು ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ ಮತ್ತು ಅವನಿಗೆ ಸಾಷ್ಟಾಂಗ ಮಾಡುತ್ತಾರೆ.
Tafsiran larabci:
 
Fassarar Ma'anoni Sura: Al'a'raf
Teburin Jerin Sunayen Surori Lambar shafi
 
Fassarar Ma'anonin Alqura'ni - Fassarar Kanadiy - Hamza Batur - Teburin Bayani kan wasu Fassarori

Ya fassara ta Muhammad Hamza Batur. An sabunta ta ƙarƙashin kulawar Cibiyar Ruwad Tarjamah.

Rufewa