Check out the new design

Terjemahan makna Alquran Alkarim - Terjemahan Berbahasa Kannada - Hamzah Batur * - Daftar isi terjemahan

PDF XML CSV Excel API
Please review the Terms and Policies

Terjemahan makna Surah: Al-Furqān   Ayah:
اَمْ تَحْسَبُ اَنَّ اَكْثَرَهُمْ یَسْمَعُوْنَ اَوْ یَعْقِلُوْنَ ؕ— اِنْ هُمْ اِلَّا كَالْاَنْعَامِ بَلْ هُمْ اَضَلُّ سَبِیْلًا ۟۠
ಅವರಲ್ಲಿ ಹೆಚ್ಚಿನವರು ಕಿವಿಗೊಡುತ್ತಾರೆ ಮತ್ತು ಆಲೋಚಿಸುತ್ತಾರೆಂದು ನೀವು ಭಾವಿಸಿದ್ದೀರಾ? ಅವರು ಕೇವಲ ಜಾನುವಾರುಗಳಂತೆ. ಅಲ್ಲ, ಅವರು ಅವುಗಳಿಗಿಂತಲೂ ಹೆಚ್ಚು ದಾರಿತಪ್ಪಿದ್ದಾರೆ.
Tafsir berbahasa Arab:
اَلَمْ تَرَ اِلٰی رَبِّكَ كَیْفَ مَدَّ الظِّلَّ ۚ— وَلَوْ شَآءَ لَجَعَلَهٗ سَاكِنًا ۚ— ثُمَّ جَعَلْنَا الشَّمْسَ عَلَیْهِ دَلِیْلًا ۟ۙ
ನಿಮ್ಮ ಪರಿಪಾಲಕನು (ಅಲ್ಲಾಹು) ನೆರಳನ್ನು ಹೇಗೆ ವಿಸ್ತರಿಸುತ್ತಿದ್ದಾನೆಂದು ನೀವು ನೋಡಿಲ್ಲವೇ? ಅವನು ಇಚ್ಛಿಸುತ್ತಿದ್ದರೆ ಅದನ್ನು ನಿಶ್ಚಲಗೊಳಿಸುತ್ತಿದ್ದನು. ನಂತರ ನಾವು ಸೂರ್ಯನನ್ನು ಅದಕ್ಕೆ ಮಾರ್ಗದರ್ಶಿಯಾಗಿ ಮಾಡಿದೆವು.
Tafsir berbahasa Arab:
ثُمَّ قَبَضْنٰهُ اِلَیْنَا قَبْضًا یَّسِیْرًا ۟
ನಂತರ ನಾವು ಅದನ್ನು ಸ್ವಲ್ಪ ಸ್ವಲ್ಪವಾಗಿ ನಮ್ಮ ಕಡೆಗೆ ಎಳೆದೆವು.
Tafsir berbahasa Arab:
وَهُوَ الَّذِیْ جَعَلَ لَكُمُ الَّیْلَ لِبَاسًا وَّالنَّوْمَ سُبَاتًا وَّجَعَلَ النَّهَارَ نُشُوْرًا ۟
ಅವನೇ ನಿಮಗೆ ರಾತ್ರಿಯನ್ನು ಉಡುಪನ್ನಾಗಿ ಮತ್ತು ನಿದ್ದೆಯನ್ನು ವಿಶ್ರಾಂತಿಯನ್ನಾಗಿ ಮಾಡಿಕೊಟ್ಟವನು. ಅವನು ಹಗಲನ್ನು ಎಚ್ಚರವಾಗಿರುವ ಸಮಯವಾಗಿ ಮಾಡಿದನು.
Tafsir berbahasa Arab:
وَهُوَ الَّذِیْۤ اَرْسَلَ الرِّیٰحَ بُشْرًاۢ بَیْنَ یَدَیْ رَحْمَتِهٖ ۚ— وَاَنْزَلْنَا مِنَ السَّمَآءِ مَآءً طَهُوْرًا ۟ۙ
ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಗಳನ್ನು ಕಳುಹಿಸುವವನು ಅವನೇ. ನಾವು ಆಕಾಶದಿಂದ ಶುದ್ಧ ನೀರನ್ನು ಇಳಿಸುತ್ತೇವೆ.
Tafsir berbahasa Arab:
لِّنُحْیِ بِهٖ بَلْدَةً مَّیْتًا وَّنُسْقِیَهٗ مِمَّا خَلَقْنَاۤ اَنْعَامًا وَّاَنَاسِیَّ كَثِیْرًا ۟
ನಿರ್ಜೀವ ಸ್ಥಿತಿಯಲ್ಲಿರುವ ಊರಿಗೆ ಅದರ ಮೂಲಕ ಜೀವ ನೀಡಲು. ನಾವು ಅದನ್ನು ನಮ್ಮ ಸೃಷ್ಟಿಗಳಲ್ಲಿ ಸೇರಿದ ಅಸಂಖ್ಯ ಜಾನುವಾರುಗಳು ಮತ್ತು ಮನುಷ್ಯರಿಗೆ ಕುಡಿಸುತ್ತೇವೆ.
Tafsir berbahasa Arab:
وَلَقَدْ صَرَّفْنٰهُ بَیْنَهُمْ لِیَذَّكَّرُوْا ۖؗ— فَاَبٰۤی اَكْثَرُ النَّاسِ اِلَّا كُفُوْرًا ۟
ಅವರು ಉಪದೇಶ ಪಡೆಯಲೆಂದು ನಾವು ಅದನ್ನು (ಮಳೆನೀರನ್ನು) ಅವರ ಮಧ್ಯೆ ವಿತರಣೆ ಮಾಡುತ್ತೇವೆ. ಆದರೆ ಜನರಲ್ಲಿ ಹೆಚ್ಚಿನವರು ನಿಷೇಧಿಸಲು ಮಾತ್ರ ಮುಂದಾಗುತ್ತಾರೆ.
Tafsir berbahasa Arab:
وَلَوْ شِئْنَا لَبَعَثْنَا فِیْ كُلِّ قَرْیَةٍ نَّذِیْرًا ۟ؗۖ
ನಾವು ಇಚ್ಛಿಸುತ್ತಿದ್ದರೆ ಎಲ್ಲ ಊರುಗಳಿಗೂ ಒಬ್ಬೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸುತ್ತಿದ್ದೆವು.
Tafsir berbahasa Arab:
فَلَا تُطِعِ الْكٰفِرِیْنَ وَجَاهِدْهُمْ بِهٖ جِهَادًا كَبِیْرًا ۟
ಆದ್ದರಿಂದ ನೀವು ಸತ್ಯನಿಷೇಧಿಗಳನ್ನು ಅನುಸರಿಸಬೇಡಿ. ಇದರ (ಕುರ್‌ಆನ್‍ನ) ಮೂಲಕ ಅವರ ವಿರುದ್ಧ ಮಹಾ ಹೋರಾಟ ಮಾಡಿರಿ.
Tafsir berbahasa Arab:
وَهُوَ الَّذِیْ مَرَجَ الْبَحْرَیْنِ هٰذَا عَذْبٌ فُرَاتٌ وَّهٰذَا مِلْحٌ اُجَاجٌ ۚ— وَجَعَلَ بَیْنَهُمَا بَرْزَخًا وَّحِجْرًا مَّحْجُوْرًا ۟
ಅವನೇ ಎರಡು ಸಮುದ್ರಗಳನ್ನು ಬೆರೆಯಲು ಬಿಟ್ಟವನು. ಒಂದರಲ್ಲಿ ತಾಜಾ ಸಿಹಿನೀರು ಮತ್ತು ಇನ್ನೊಂದರಲ್ಲಿ ಕಹಿ ಉಪ್ಪು ನೀರು. ಅವನು ಅವೆರಡರ ಮಧ್ಯೆ ಒಂದು ಪರದೆಯನ್ನು ಮತ್ತು ಬಲಿಷ್ಠ ತಡೆಯನ್ನು ನಿರ್ಮಸಿದ್ದಾನೆ.
Tafsir berbahasa Arab:
وَهُوَ الَّذِیْ خَلَقَ مِنَ الْمَآءِ بَشَرًا فَجَعَلَهٗ نَسَبًا وَّصِهْرًا ؕ— وَكَانَ رَبُّكَ قَدِیْرًا ۟
ಅವನೇ ಮನುಷ್ಯನನ್ನು ನೀರಿನಿಂದ ಸೃಷ್ಟಿಸಿದವನು. ನಂತರ ಅವನಿಗೆ ವಂಶಾವಳಿಯನ್ನು ಮತ್ತು ವೈವಾಹಿಕ ಸಂಬಂಧಿಗಳನ್ನು ಮಾಡಿಕೊಟ್ಟನು. ನಿಮ್ಮ ಪರಿಪಾಲಕನು (ಅಲ್ಲಾಹು) ಸರ್ವಶಕ್ತನಾಗಿದ್ದಾನೆ.
Tafsir berbahasa Arab:
وَیَعْبُدُوْنَ مِنْ دُوْنِ اللّٰهِ مَا لَا یَنْفَعُهُمْ وَلَا یَضُرُّهُمْ ؕ— وَكَانَ الْكَافِرُ عَلٰی رَبِّهٖ ظَهِیْرًا ۟
ಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಿದ್ದಾರೆ. ಸತ್ಯನಿಷೇಧಿಯು ತನ್ನ ಪರಿಪಾಲಕನ ವಿರುದ್ಧ (ಶೈತಾನನಿಗೆ) ಬೆಂಬಲಿಗನಾಗಿದ್ದಾನೆ.
Tafsir berbahasa Arab:
 
Terjemahan makna Surah: Al-Furqān
Daftar surah Nomor Halaman
 
Terjemahan makna Alquran Alkarim - Terjemahan Berbahasa Kannada - Hamzah Batur - Daftar isi terjemahan

Ditafsirkan oleh Muhammad Hamzah Batur. Dikembangkan di bawah pengawasan Pusat Terjemah Ruwwād.

Tutup