クルアーンの対訳 - الترجمة الكنادية * - 対訳の目次

XML CSV Excel API
Please review the Terms and Policies

対訳 章: 雷電章   節:

ಸೂರ ಅರ್‍ರಅ್ ದ್

الٓمّٓرٰ ۫— تِلْكَ اٰیٰتُ الْكِتٰبِ ؕ— وَالَّذِیْۤ اُنْزِلَ اِلَیْكَ مِنْ رَّبِّكَ الْحَقُّ وَلٰكِنَّ اَكْثَرَ النَّاسِ لَا یُؤْمِنُوْنَ ۟
ಅಲಿಫ್ ಲಾಮ್ ಮೀಮ್ ರಾ. ಇವು ಗ್ರಂಥದ ವಚನಗಳು. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಏನು ಅವತೀರ್ಣವಾಗಿದೆಯೋ ಅದು ಸತ್ಯವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ.
アラビア語 クルアーン注釈:
اَللّٰهُ الَّذِیْ رَفَعَ السَّمٰوٰتِ بِغَیْرِ عَمَدٍ تَرَوْنَهَا ثُمَّ اسْتَوٰی عَلَی الْعَرْشِ وَسَخَّرَ الشَّمْسَ وَالْقَمَرَ ؕ— كُلٌّ یَّجْرِیْ لِاَجَلٍ مُّسَمًّی ؕ— یُدَبِّرُ الْاَمْرَ یُفَصِّلُ الْاٰیٰتِ لَعَلَّكُمْ بِلِقَآءِ رَبِّكُمْ تُوْقِنُوْنَ ۟
ನೀವು ನೋಡುತ್ತಿರುವಂತೆ ಯಾವುದೇ ಸ್ಥಂಭಗಳ ಆಧಾರವಿಲ್ಲದೆ ಆಕಾಶವನ್ನು ಎತ್ತಿ ನಿಲ್ಲಿಸಿದವನೇ ಅಲ್ಲಾಹು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಸೂರ್ಯ-ಚಂದ್ರರನ್ನು ಅಧೀನಗೊಳಿಸಿದ್ದಾನೆ. ಎಲ್ಲವೂ ಒಂದು ನಿಗದಿತ ಅವಧಿಯ ತನಕ ಚಲಿಸುತ್ತಿರುವುವು. ಅವನು ಎಲ್ಲಾ ವಿಷಯಗಳನ್ನು ನಿಯಂತ್ರಿಸುತ್ತಾನೆ. ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವ ವಿಷಯದಲ್ಲಿ ದೃಢವಿಶ್ವಾಸಿಗಳಾಗುವುದಕ್ಕಾಗಿ ಅವನು ತನ್ನ ದೃಷ್ಟಾಂತಗಳನ್ನು ಸ್ಪಷ್ಟವಾಗಿ ವಿವರಿಸಿಕೊಡುತ್ತಿದ್ದಾನೆ.
アラビア語 クルアーン注釈:
وَهُوَ الَّذِیْ مَدَّ الْاَرْضَ وَجَعَلَ فِیْهَا رَوَاسِیَ وَاَنْهٰرًا ؕ— وَمِنْ كُلِّ الثَّمَرٰتِ جَعَلَ فِیْهَا زَوْجَیْنِ اثْنَیْنِ یُغْشِی الَّیْلَ النَّهَارَ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّتَفَكَّرُوْنَ ۟
ಭೂಮಿಯನ್ನು ವಿಸ್ತರಿಸಿದವನು ಅವನೇ. ಅವನು ಅದರಲ್ಲಿ ಪರ್ವತಗಳನ್ನು ಮತ್ತು ನದಿಗಳನ್ನು ಸೃಷ್ಟಿಸಿದನು. ಎಲ್ಲಾ ವಿಧ ಹಣ್ಣುಗಳಲ್ಲೂ ಅವನು ಎರಡೆರಡು ಜೋಡಿಗಳನ್ನು ಸೃಷ್ಟಿಸಿದನು.[1] ಅವನು ರಾತ್ರಿಯನ್ನು ಹಗಲಿನ ಮೇಲೆ ಮುಚ್ಚುತ್ತಾನೆ. ಆಲೋಚಿಸುವ ಜನರಿಗೆ ಅದರಲ್ಲಿ ಖಂಡಿತ ದೃಷ್ಟಾಂತಗಳಿವೆ.
[1] ಇದರ ಒಂದು ಅರ್ಥ ಏನೆಂದರೆ ಅಲ್ಲಾಹು ಎಲ್ಲಾ ಹಣ್ಣುಗಳಲ್ಲೂ ಗಂಡು-ಹೆಣ್ಣುಗಳನ್ನು ಸೃಷ್ಟಿಸಿದ್ದಾನೆ. ಇನ್ನೊಂದು ಅರ್ಥವೇನೆಂದರೆ, ಅವನು ಎಲ್ಲಾ ಹಣ್ಣುಗಳನ್ನು ವಿಭಿನ್ನ ಗುಣಗಳಲ್ಲಿ ಸೃಷ್ಟಿಸಿದ್ದಾನೆ. ಉದಾಹರಣೆಗೆ, ಸಿಹಿ-ಕಹಿ, ಉಷ್ಣ-ತಂಪು, ಕಪ್ಪು-ಬಿಳಿ ಇತ್ಯಾದಿ.
アラビア語 クルアーン注釈:
وَفِی الْاَرْضِ قِطَعٌ مُّتَجٰوِرٰتٌ وَّجَنّٰتٌ مِّنْ اَعْنَابٍ وَّزَرْعٌ وَّنَخِیْلٌ صِنْوَانٌ وَّغَیْرُ صِنْوَانٍ یُّسْقٰی بِمَآءٍ وَّاحِدٍ ۫— وَنُفَضِّلُ بَعْضَهَا عَلٰی بَعْضٍ فِی الْاُكُلِ ؕ— اِنَّ فِیْ ذٰلِكَ لَاٰیٰتٍ لِّقَوْمٍ یَّعْقِلُوْنَ ۟
ಭೂಮಿಯಲ್ಲಿ ಒಂದಕ್ಕೊಂದು ತಾಗಿಕೊಂಡಿರುವ ವಿಭಿನ್ನ ಜಮೀನುಗಳು, ದ್ರಾಕ್ಷಿ ತೋಟಗಳು, ಹೊಲಗಳು, ರೆಂಭೆಗಳಿರುವ ಮತ್ತು ರೆಂಭೆಗಳಿಲ್ಲದ ಖರ್ಜೂರ ಮರಗಳು ಇವೆ. ಇವೆಲ್ಲದ್ದಕ್ಕೂ ಒಂದೇ ನೀರನ್ನು ಉಣಿಸಲಾಗುತ್ತದೆ. ಆದರೂ ಅವುಗಳ ಹಣ್ಣುಗಳಲ್ಲಿ ಒಂದಕ್ಕೆ ಇನ್ನೊಂದಕ್ಕಿಂತ ಶ್ರೇಷ್ಠತೆಯನ್ನು ನೀಡುತ್ತೇವೆ. ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ಖಂಡಿತ ದೃಷ್ಟಾಂತಗಳಿವೆ.
アラビア語 クルアーン注釈:
وَاِنْ تَعْجَبْ فَعَجَبٌ قَوْلُهُمْ ءَاِذَا كُنَّا تُرٰبًا ءَاِنَّا لَفِیْ خَلْقٍ جَدِیْدٍ ؕ۬— اُولٰٓىِٕكَ الَّذِیْنَ كَفَرُوْا بِرَبِّهِمْ ۚ— وَاُولٰٓىِٕكَ الْاَغْلٰلُ فِیْۤ اَعْنَاقِهِمْ ۚ— وَاُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟
ನಿಮಗೆ ಅಚ್ಚರಿಯಾಗುವುದಾದರೆ, ವಾಸ್ತವದಲ್ಲಿ ಅವರು ಹೇಳುವ “ನಾವು ಮಣ್ಣಾಗಿ ಬಿಟ್ಟ ಬಳಿಕ ನಮ್ಮನ್ನು ಪುನಃ ಸೃಷ್ಟಿಸಲಾಗುವುದೇ?” ಎಂಬ ಮಾತು ಹೆಚ್ಚು ಅಚ್ಚರಿದಾಯಕವಾಗಿದೆ. ಅವರೇ ಅವರ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರು. ಅವರ ಕಂಠಗಳಲ್ಲಿ ಸಂಕೋಲೆಗಳಿವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
アラビア語 クルアーン注釈:
وَیَسْتَعْجِلُوْنَكَ بِالسَّیِّئَةِ قَبْلَ الْحَسَنَةِ وَقَدْ خَلَتْ مِنْ قَبْلِهِمُ الْمَثُلٰتُ ؕ— وَاِنَّ رَبَّكَ لَذُوْ مَغْفِرَةٍ لِّلنَّاسِ عَلٰی ظُلْمِهِمْ ۚ— وَاِنَّ رَبَّكَ لَشَدِیْدُ الْعِقَابِ ۟
ಅವರು ನಿಮ್ಮೊಡನೆ ಒಳಿತಿಗಿಂತ ಮೊದಲು ಕೆಡುಕನ್ನು (ಶಿಕ್ಷೆಯನ್ನು) ತರಲು ತ್ವರೆ ಮಾಡುತ್ತಾರೆ. ಮಾದರೀಯೋಗ್ಯ ಶಿಕ್ಷೆಗಳು ಅವರಿಗಿಂತ ಮೊದಲಿನ ತಲೆಮಾರುಗಳಿಗೆ ಈಗಾಗಲೇ ಸಂಭವಿಸಿಬಿಟ್ಟಿದೆ. ನಿಶ್ಚಯವಾಗಿಯೂ, ಜನರು ಅಕ್ರಮಿಗಳಾಗಿದ್ದೂ ಸಹ ನಿಮ್ಮ ಪರಿಪಾಲಕನು (ಅಲ್ಲಾಹು) ಅವರನ್ನು ಕ್ಷಮಿಸುವವನಾಗಿದ್ದಾನೆ. ನಿಶ್ಚಯವಾಗಿಯೂ, ನಿಮ್ಮ ಪರಿಪಾಲಕನು (ಅಲ್ಲಾಹು) ಅತಿಕಠೋರವಾಗಿ ಶಿಕ್ಷಿಸುವವನೂ ಆಗಿದ್ದಾನೆ.
アラビア語 クルアーン注釈:
وَیَقُوْلُ الَّذِیْنَ كَفَرُوْا لَوْلَاۤ اُنْزِلَ عَلَیْهِ اٰیَةٌ مِّنْ رَّبِّهٖ ؕ— اِنَّمَاۤ اَنْتَ مُنْذِرٌ وَّلِكُلِّ قَوْمٍ هَادٍ ۟۠
ಸತ್ಯನಿಷೇಧಿಗಳು ಕೇಳುತ್ತಾರೆ: “ಇವನಿಗೆ ಇವನ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಲಾಗಿಲ್ಲ?” ನೀವು ಮುನ್ನೆಚ್ಚರಿಕೆ ನೀಡುವವರು ಮಾತ್ರ. ಎಲ್ಲಾ ಜನರಿಗೂ ಒಬ್ಬ ಮಾರ್ಗದರ್ಶಕನಿದ್ದಾನೆ.
アラビア語 クルアーン注釈:
اَللّٰهُ یَعْلَمُ مَا تَحْمِلُ كُلُّ اُ وَمَا تَغِیْضُ الْاَرْحَامُ وَمَا تَزْدَادُ ؕ— وَكُلُّ شَیْءٍ عِنْدَهٗ بِمِقْدَارٍ ۟
ತಾಯಿ ತನ್ನ ಉದರದಲ್ಲಿ ಏನು ಹೊತ್ತಿದ್ದಾಳೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ಗರ್ಭಾಶಯಗಳು ತಗ್ಗುವುದನ್ನು ಮತ್ತು ಉಬ್ಬುವುದನ್ನು ಅವನು ತಿಳಿಯುತ್ತಾನೆ. ಎಲ್ಲವೂ ಅವನ ಬಳಿ ಒಂದು ನಿರ್ಣಯದಂತೆ ಇವೆ.
アラビア語 クルアーン注釈:
عٰلِمُ الْغَیْبِ وَالشَّهَادَةِ الْكَبِیْرُ الْمُتَعَالِ ۟
ಅವನು ದೃಶ್ಯ-ಅದೃಶ್ಯಗಳನ್ನು ತಿಳಿದವನಾಗಿದ್ದಾನೆ. ಅವನು ಮಹಾನನು ಮತ್ತು ಅತ್ಯುನ್ನತನಾಗಿದ್ದಾನೆ.
アラビア語 クルアーン注釈:
سَوَآءٌ مِّنْكُمْ مَّنْ اَسَرَّ الْقَوْلَ وَمَنْ جَهَرَ بِهٖ وَمَنْ هُوَ مُسْتَخْفٍ بِالَّیْلِ وَسَارِبٌ بِالنَّهَارِ ۟
ನಿಮ್ಮಲ್ಲಿ ಮಾತನ್ನು ರಹಸ್ಯವಾಗಿ ಹೇಳುವವನು ಮತ್ತು ಅದನ್ನು ಬಹಿರಂಗವಾಗಿ ಹೇಳುವವನು, ರಾತ್ರಿಯಲ್ಲಿ ಅಡಗಿಕೊಳ್ಳುವವನು ಮತ್ತು ಹಗಲಲ್ಲಿ ನಡೆದಾಡುವವನು—ಎಲ್ಲರೂ ಅಲ್ಲಾಹನಿಗೆ ಸಂಬಂಧಿಸಿದಂತೆ ಸಮಾನರಾಗಿದ್ದಾರೆ.
アラビア語 クルアーン注釈:
لَهٗ مُعَقِّبٰتٌ مِّنْ بَیْنِ یَدَیْهِ وَمِنْ خَلْفِهٖ یَحْفَظُوْنَهٗ مِنْ اَمْرِ اللّٰهِ ؕ— اِنَّ اللّٰهَ لَا یُغَیِّرُ مَا بِقَوْمٍ حَتّٰی یُغَیِّرُوْا مَا بِاَنْفُسِهِمْ ؕ— وَاِذَاۤ اَرَادَ اللّٰهُ بِقَوْمٍ سُوْٓءًا فَلَا مَرَدَّ لَهٗ ۚ— وَمَا لَهُمْ مِّنْ دُوْنِهٖ مِنْ وَّالٍ ۟
ಮನುಷ್ಯನ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಅವನ ಪಹರೆಗಾರರಿದ್ದಾರೆ.[1] ಅಲ್ಲಾಹನ ಆಜ್ಞೆಯಂತೆ ಅವರು ಅವನನ್ನು ಕಾಯುತ್ತಾರೆ. ಜನರು ಸ್ವಯಂ ತಮ್ಮಲ್ಲಿ ಬದಲಾವಣೆ ತರುವ ತನಕ ಅಲ್ಲಾಹು ಅವರ ಸ್ಥಿತಿಯನ್ನು ಖಂಡಿತ ಬದಲಾಯಿಸುವುದಿಲ್ಲ. ಯಾವುದಾದರೂ ಜನರನ್ನು ಶಿಕ್ಷಿಸಬೇಕೆಂದು ಅಲ್ಲಾಹು ಬಯಸಿದರೆ ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಅವನ ಹೊರತು ಅವರಿಗೆ ಬೇರೆ ರಕ್ಷಕರೂ ಇಲ್ಲ.
[1] ಪಹರೆಗಾರರು ಎಂದರೆ ದೇವದೂತರು.
アラビア語 クルアーン注釈:
هُوَ الَّذِیْ یُرِیْكُمُ الْبَرْقَ خَوْفًا وَّطَمَعًا وَّیُنْشِئُ السَّحَابَ الثِّقَالَ ۟ۚ
ಅವನೇ ನಿಮಗೆ ಭಯ ಮತ್ತು ನಿರೀಕ್ಷೆಯಾಗಿ ಮಿಂಚನ್ನು ತೋರಿಸುವವನು. ಅವನು ಭಾರವಾದ ಮೋಡಗಳನ್ನು ಸೃಷ್ಟಿಸುತ್ತಾನೆ.
アラビア語 クルアーン注釈:
وَیُسَبِّحُ الرَّعْدُ بِحَمْدِهٖ وَالْمَلٰٓىِٕكَةُ مِنْ خِیْفَتِهٖ ۚ— وَیُرْسِلُ الصَّوَاعِقَ فَیُصِیْبُ بِهَا مَنْ یَّشَآءُ وَهُمْ یُجَادِلُوْنَ فِی اللّٰهِ ۚ— وَهُوَ شَدِیْدُ الْمِحَالِ ۟ؕ
ಸಿಡಿಲು ಅವನನ್ನು ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡುತ್ತದೆ ಮತ್ತು ದೇವದೂತರುಗಳು ಕೂಡ ಅವನ ಭಯದಿಂದ (ಅವನನ್ನು ಸ್ತುತಿಸುತ್ತಾರೆ). ಅವನು ಸಿಡಿಲುಗಳನ್ನು ಕಳುಹಿಸಿ, ಅವನು ಇಚ್ಛಿಸುವವರಿಗೆ ಅದು ಬಡಿಯುವಂತೆ ಮಾಡುತ್ತಾನೆ. ಸತ್ಯನಿಷೇಧಿಗಳು ಅಲ್ಲಾಹನ ವಿಷಯದಲ್ಲಿ ತರ್ಕಿಸುತ್ತಾರೆ. ಆದರೆ ಅಲ್ಲಾಹು ಮಹಾ ಶಕ್ತಿಶಾಲಿಯಾಗಿದ್ದಾನೆ.
アラビア語 クルアーン注釈:
لَهٗ دَعْوَةُ الْحَقِّ ؕ— وَالَّذِیْنَ یَدْعُوْنَ مِنْ دُوْنِهٖ لَا یَسْتَجِیْبُوْنَ لَهُمْ بِشَیْءٍ اِلَّا كَبَاسِطِ كَفَّیْهِ اِلَی الْمَآءِ لِیَبْلُغَ فَاهُ وَمَا هُوَ بِبَالِغِهٖ ؕ— وَمَا دُعَآءُ الْكٰفِرِیْنَ اِلَّا فِیْ ضَلٰلٍ ۟
ಅವನನ್ನು ಕರೆದು ಪ್ರಾರ್ಥಿಸುವುದೇ ನಿಜವಾದ ಪ್ರಾರ್ಥನೆ. ಅವರು ಅವನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತಾರೋ ಅವರು ಅವರ ಪ್ರಾರ್ಥನೆಗೆ ಸ್ವಲ್ಪವೂ ಉತ್ತರ ನೀಡುವುದಿಲ್ಲ. ಅವರ (ಪ್ರಾರ್ಥಿಸುವವರ) ಸ್ಥಿತಿಯು ತನ್ನ ಎರಡು ಕೈಗಳನ್ನು ದೂರದಿಂದ ನೀರಿನ ಕಡೆಗೆ ಚಾಚಿ ಅದು ತನ್ನ ಬಾಯಿಗೆ ತಲುಪಬೇಕೆಂದು ಅದರೊಡನೆ ಕೇಳುವವನಂತೆ. ಅದು ಅವನ ಬಾಯಿಗೆ ತಲುಪುವುದಿಲ್ಲ. ಸತ್ಯನಿಷೇಧಿಗಳ ಪ್ರಾರ್ಥನೆಯು ವ್ಯರ್ಥವಲ್ಲದೆ ಇನ್ನೇನೂ ಅಲ್ಲ.[1]
[1] ಅಲ್ಲಾಹನನ್ನು ಬಿಟ್ಟು ಇತರ ದೇವರುಗಳನ್ನು ಕರೆದು ಪ್ರಾರ್ಥಿಸುವವರ ಸ್ಥಿತಿಯು ನೀರಿನ ಕಡೆಗೆ ತನ್ನ ಎರಡು ಕೈಗಳನ್ನು ಚಾಚಿ ಅದು ತನ್ನ ಬಾಯಿಗೆ ಬರಬೇಕೆಂದು ಬೇಡಿಕೊಳ್ಳುವವನಂತೆ. ನೀರಿಗೆ ಈತನ ಬೇಡಿಕೆಯೇನೆಂದು ತಿಳಿದಿಲ್ಲ. ಅವನು ತನ್ನೊಡನೆ ಬಾಯಿಗೆ ತಲುಪಬೇಕೆಂದು ಬೇಡುತ್ತಿದ್ದಾನೆಂದೂ ಅದಕ್ಕೆ ತಿಳಿದಿಲ್ಲ. ಅವನ ಬಾಯಿಗೆ ತಲುಪುವ ಶಕ್ತಿಯೂ ಅದಕ್ಕಿಲ್ಲ. ಅದೇ ರೀತಿ ಇವರು ಕರೆದು ಪ್ರಾರ್ಥಿಸುತ್ತಿರುವ ದೇವರುಗಳಿಗೂ ಇವರು ತಮ್ಮನ್ನು ಕರೆದು ಪ್ರಾರ್ಥಿಸುತ್ತಿದ್ದಾರೆಂದು ತಿಳಿದಿಲ್ಲ. ಅವರ ಬೇಡಿಕೆಯೇನೆಂದೂ ತಿಳಿದಿಲ್ಲ. ಆ ಬೇಡಿಕೆಯನ್ನು ಈಡೇರಿಸಿಕೊಡುವ ಶಕ್ತಿಯೂ ಅವರಿಗಿಲ್ಲ.
アラビア語 クルアーン注釈:
وَلِلّٰهِ یَسْجُدُ مَنْ فِی السَّمٰوٰتِ وَالْاَرْضِ طَوْعًا وَّكَرْهًا وَّظِلٰلُهُمْ بِالْغُدُوِّ وَالْاٰصَالِ ۟
ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಸ್ವಯಂಪ್ರೇರಣೆಯಿಂದ ಅಥವಾ ಬಲವಂತವಾಗಿ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಬೆಳಗ್ಗೆ ಮತ್ತು ಸಂಜೆ ಅವರ ನೆರಳುಗಳು ಕೂಡ (ಸಾಷ್ಟಾಂಗ ಮಾಡುತ್ತವೆ).
アラビア語 クルアーン注釈:
قُلْ مَنْ رَّبُّ السَّمٰوٰتِ وَالْاَرْضِ ؕ— قُلِ اللّٰهُ ؕ— قُلْ اَفَاتَّخَذْتُمْ مِّنْ دُوْنِهٖۤ اَوْلِیَآءَ لَا یَمْلِكُوْنَ لِاَنْفُسِهِمْ نَفْعًا وَّلَا ضَرًّا ؕ— قُلْ هَلْ یَسْتَوِی الْاَعْمٰی وَالْبَصِیْرُ ۙ۬— اَمْ هَلْ تَسْتَوِی الظُّلُمٰتُ وَالنُّوْرُ ۚ۬— اَمْ جَعَلُوْا لِلّٰهِ شُرَكَآءَ خَلَقُوْا كَخَلْقِهٖ فَتَشَابَهَ الْخَلْقُ عَلَیْهِمْ ؕ— قُلِ اللّٰهُ خَالِقُ كُلِّ شَیْءٍ وَّهُوَ الْوَاحِدُ الْقَهَّارُ ۟
ಕೇಳಿರಿ: “ಭೂಮ್ಯಾಕಾಶಗಳ ಪರಿಪಾಲಕ ಯಾರು?” ಹೇಳಿರಿ: “ಅಲ್ಲಾಹು.” ಕೇಳಿರಿ: “ಆದರೂ ನೀವು ಅವನನ್ನು ಬಿಟ್ಟು ಸ್ವಯಂ ಉಪಕಾರ ಅಥವಾ ತೊಂದರೆ ಮಾಡಲು ಕೂಡ ಸಾಧ್ಯವಿಲ್ಲದವರನ್ನು ರಕ್ಷಕರಾಗಿ ಸ್ವೀಕರಿಸಿದ್ದೀರಾ?” ಕೇಳಿರಿ: “ಕಣ್ಣು ಕಾಣದವನು ಮತ್ತು ಕಣ್ಣು ಕಾಣುವವನು ಸಮಾನರಾಗಲು ಸಾಧ್ಯವೇ? ಅಂಧಕಾರಗಳು ಮತ್ತು ಬೆಳಕು ಸಮಾನವಾಗಲು ಸಾಧ್ಯವೇ? ಇವರು ಅಲ್ಲಾಹನೊಂದಿಗೆ ಸಹಭಾಗಿಗಳಾಗಿ ಮಾಡಿದ ಆ ದೇವರುಗಳು ಕೂಡ ಅಲ್ಲಾಹು ಸೃಷ್ಟಿಸುವಂತೆಯೇ ಸೃಷ್ಟಿಸಿ, ಇವರಿಗೆ (ಎರಡೂ ಕಡೆಯ) ಸೃಷ್ಟಿಗಳು ಪರಸ್ಪರ ಸಮಾನವಾಗಿ ಕಾಣುತ್ತಿದೆಯೇ?”[1] ಹೇಳಿರಿ: “ಅಲ್ಲಾಹನೇ ಎಲ್ಲಾ ಸೃಷ್ಟಿಗಳ ಸೃಷ್ಟಿಕರ್ತ. ಅವನು ಏಕೈಕನು ಮತ್ತು ಮಹಾ ಶಕ್ತಿಶಾಲಿಯಾಗಿದ್ದಾನೆ.”
[1] ಸೃಷ್ಟಿಕರ್ತನು ಏಕೈಕ ದೇವನಾದ ಅಲ್ಲಾಹು ಮಾತ್ರ. ಇದನ್ನು ಬಹುದೇವವಿಶ್ವಾಸಿಗಳು ಕೂಡ ಒಪ್ಪಿಕೊಳ್ಳುತ್ತಾರೆ. ಒಂದು ವೇಳೆ ಅಲ್ಲಾಹನ ಹೊರತಾಗಿ ಬೇರೆ ಸೃಷ್ಟಿಕರ್ತನು ಇರುತ್ತಿದ್ದರೆ, ಇಬ್ಬರ ಸೃಷ್ಟಿಗಳು ಬೇರೆ ಬೇರೆಯಾಗಿಯೇ ಇರುತ್ತಿದ್ದವು. ಜಗತ್ತಿನಲ್ಲಿರುವ ಸೃಷ್ಟಿಗಳಲ್ಲಿ ಇಂತಹ ಯಾವುದೇ ವಿರೋಧಾಭಾಸ ನಮಗೆ ಕಂಡುಬರುವುದಿಲ್ಲವಾದ್ದರಿಂದ ಇಬ್ಬರು ಸೃಷ್ಟಿಕರ್ತರೂ ಸ್ವಲ್ಪವೂ ವ್ಯತ್ಯಾಸವಿಲ್ಲದೆ ಒಂದೇ ರೀತಿಯಲ್ಲಿ ಸೃಷ್ಟಿಸುತ್ತಿದ್ದಾರೆಂದು ಹೇಳಬೇಕಾಗುತ್ತದೆ. ಇದು ಅಸಂಭವ್ಯವಾಗಿದೆ.
アラビア語 クルアーン注釈:
اَنْزَلَ مِنَ السَّمَآءِ مَآءً فَسَالَتْ اَوْدِیَةٌ بِقَدَرِهَا فَاحْتَمَلَ السَّیْلُ زَبَدًا رَّابِیًا ؕ— وَمِمَّا یُوْقِدُوْنَ عَلَیْهِ فِی النَّارِ ابْتِغَآءَ حِلْیَةٍ اَوْ مَتَاعٍ زَبَدٌ مِّثْلُهٗ ؕ— كَذٰلِكَ یَضْرِبُ اللّٰهُ الْحَقَّ وَالْبَاطِلَ ؕ۬— فَاَمَّا الزَّبَدُ فَیَذْهَبُ جُفَآءً ۚ— وَاَمَّا مَا یَنْفَعُ النَّاسَ فَیَمْكُثُ فِی الْاَرْضِ ؕ— كَذٰلِكَ یَضْرِبُ اللّٰهُ الْاَمْثَالَ ۟ؕ
ಅವನು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಕಣಿವೆಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ತುಂಬಿ ಹರಿದವು. ಆಗ ನೀರಿನ ಮೇಲಕ್ಕೆದ್ದು ಬರುವ ನೊರೆಗಳನ್ನು ಪ್ರವಾಹವು ಹೊತ್ತು ಹರಿಯುತ್ತದೆ. ಅವರು ಆಭರಣಗಳನ್ನು ಅಥವಾ ಉಪಕರಣಗಳನ್ನು ತಯಾರಿಸಲು ಬೆಂಕಿಗೆ ಹಾಕಿ ಕಾಯಿಸುವ ಲೋಹಗಳಿಂದಲೂ ಇದರಂತಹ ನೊರೆಗಳು ಬರುತ್ತವೆ. ಈ ರೀತಿಯಲ್ಲಿ ಅಲ್ಲಾಹು ಸತ್ಯ ಮತ್ತು ಅಸತ್ಯಕ್ಕೆ ಉದಾಹರಣೆ ಕೊಡುತ್ತಾನೆ. ನೊರೆಗಳು ಆರಿ ಮಾಯವಾಗುತ್ತವೆ. ಮನುಷ್ಯರಿಗೆ ಉಪಕಾರವಾಗುವ ವಿಷಯಗಳು ಭೂಮಿಯಲ್ಲಿ ಸ್ಥಿರವಾಗಿ ನಿಲ್ಲುತ್ತವೆ. ಈ ರೀತಿ ಅಲ್ಲಾಹು ಉದಾರಹಣೆಗಳನ್ನು ತಿಳಿಸುತ್ತಾನೆ.[1]
[1] ನೀರು ಹರಿಯುವಾಗ ಅದರ ಮೇಲೆ ನೊರೆಗಳು ಉಂಟಾಗುತ್ತವೆ. ಈ ನೊರೆಗಳು ಶಾಶ್ವತವಾಗಿ ಉಳಿಯುವುದಿಲ್ಲ. ಹಾಗೆಯೇ ಆಭರಣಗಳನ್ನು ತಯಾರಿಸಲು ಚಿನ್ನ-ಬೆಳ್ಳಿಗಳನ್ನು ಅಥವಾ ಉಪಕರಣಗಳನ್ನು ತಯಾರಿಸಲು ಹಿತ್ತಾಳೆ-ಕಂಚುಗಳನ್ನು ಕಾಯಿಸುವಾಗ ಅವುಗಳಿಂದಲೂ ನೊರೆಗಳು ಏಳುತ್ತವೆ. ಇವು ಕೂಡ ಶಾಶ್ವತವಾಗಿ ಉಳಿಯುವುದಿಲ್ಲ. ಇವುಗಳಿಂದ ಮನುಷ್ಯರಿಗೆ ಪ್ರಯೋಜನವೂ ಇಲ್ಲ. ಆದರೆ ನೀರು, ಚಿನ್ನ, ಬೆಳ್ಳಿ, ಹಿತ್ತಾಳೆ, ಕಂಚು ಮೊದಲಾದವುಗಳು ಬಾಕಿಯುಳಿಯುತ್ತವೆ ಮತ್ತು ಅವರು ಮನುಷ್ಯರಿಗೆ ಪ್ರಯೋಜನಕಾರಿಯಾಗಿವೆ. ಅಸತ್ಯವು ನೊರೆಯಂತೆ, ಅದು ಶಾಶ್ವತವಾಗಿ ಉಳಿಯುವುದಿಲ್ಲ. ಸತ್ಯವು ನೀರು, ಚಿನ್ನ, ಬೆಳ್ಳಿ ಮುಂತಾದವುಗಳಂತೆ, ಅವು ಶಾಶ್ವತವಾಗಿ ಉಳಿಯುತ್ತವೆ ಮತ್ತು ಅವುಗಳಿಂದ ಮನುಷ್ಯರಿಗೆ ಪ್ರಯೋಜನಗಳಿವೆ.
アラビア語 クルアーン注釈:
لِلَّذِیْنَ اسْتَجَابُوْا لِرَبِّهِمُ الْحُسْنٰی ؔؕ— وَالَّذِیْنَ لَمْ یَسْتَجِیْبُوْا لَهٗ لَوْ اَنَّ لَهُمْ مَّا فِی الْاَرْضِ جَمِیْعًا وَّمِثْلَهٗ مَعَهٗ لَافْتَدَوْا بِهٖ ؕ— اُولٰٓىِٕكَ لَهُمْ سُوْٓءُ الْحِسَابِ ۙ۬— وَمَاْوٰىهُمْ جَهَنَّمُ ؕ— وَبِئْسَ الْمِهَادُ ۟۠
ತಮ್ಮ ಪರಿಪಾಲಕನ (ಅಲ್ಲಾಹನ) ಕರೆಗೆ ಉತ್ತರ ನೀಡಿದವರಿಗೆ ಅತಿಶ್ರೇಷ್ಠ ಪ್ರತಿಫಲವಿದೆ. ಅವನ ಕರೆಗೆ ಉತ್ತರ ಕೊಡದವರು ಯಾರೋ—ಅವರ ವಶದಲ್ಲಿ ಭೂಮಿಯಲ್ಲಿರುವ ಎಲ್ಲವೂ ಮತ್ತು ಅದರೊಂದಿಗೆ ಅಷ್ಟೇ ಬೇರೆಯೂ ಇದ್ದರೂ ಅವರು (ತಮ್ಮ ರಕ್ಷಣೆಗಾಗಿ) ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು! ಅವರಿಗೇ ಅತಿಕೆಟ್ಟ ವಿಚಾರಣೆಯಿರುವುದು. ಅವರ ವಾಸಸ್ಥಳವು ನರಕವಾಗಿದೆ. ಅದು ಬಹಳ ನಿಕೃಷ್ಟ ವಾಸ್ತವ್ಯವಾಗಿದೆ.
アラビア語 クルアーン注釈:
اَفَمَنْ یَّعْلَمُ اَنَّمَاۤ اُنْزِلَ اِلَیْكَ مِنْ رَّبِّكَ الْحَقُّ كَمَنْ هُوَ اَعْمٰی ؕ— اِنَّمَا یَتَذَكَّرُ اُولُوا الْاَلْبَابِ ۟ۙ
ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಸತ್ಯವೆಂದು ತಿಳಿದವನು ಕಣ್ಣು ಕಾಣದ ವ್ಯಕ್ತಿಯಂತೆಯೇ? ಬುದ್ಧಿವಂತರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.
アラビア語 クルアーン注釈:
الَّذِیْنَ یُوْفُوْنَ بِعَهْدِ اللّٰهِ وَلَا یَنْقُضُوْنَ الْمِیْثَاقَ ۟ۙ
ಅಲ್ಲಾಹನ ಕರಾರುಗಳನ್ನು ನೆರವೇರಿಸುವವರು ಮತ್ತು ಒಪ್ಪಂದಗಳನ್ನು ಮುರಿಯದವರು,
アラビア語 クルアーン注釈:
وَالَّذِیْنَ یَصِلُوْنَ مَاۤ اَمَرَ اللّٰهُ بِهٖۤ اَنْ یُّوْصَلَ وَیَخْشَوْنَ رَبَّهُمْ وَیَخَافُوْنَ سُوْٓءَ الْحِسَابِ ۟ؕ
ಅಲ್ಲಾಹು ಜೋಡಿಸಲು ಆಜ್ಞಾಪಿಸಿದ್ದನ್ನು ಜೋಡಿಸುವವರು, ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರು ಮತ್ತು ಕೆಟ್ಟ ವಿಚಾರಣೆಯನ್ನು ಹೆದರುವವರು,
アラビア語 クルアーン注釈:
وَالَّذِیْنَ صَبَرُوا ابْتِغَآءَ وَجْهِ رَبِّهِمْ وَاَقَامُوا الصَّلٰوةَ وَاَنْفَقُوْا مِمَّا رَزَقْنٰهُمْ سِرًّا وَّعَلَانِیَةً وَّیَدْرَءُوْنَ بِالْحَسَنَةِ السَّیِّئَةَ اُولٰٓىِٕكَ لَهُمْ عُقْبَی الدَّارِ ۟ۙ
ತಮ್ಮ ಪರಿಪಾಲಕನ (ಅಲ್ಲಾಹನ) ಸಂಪ್ರೀತಿಗಾಗಿ ತಾಳ್ಮೆ ವಹಿಸುವವರು, ನಮಾಝ್ ಸಂಸ್ಥಾಪಿಸುವವರು, ನಾವು ನೀಡಿದ ಧನದಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡುವವರು ಮತ್ತು ಒಳಿತು ಮಾಡುವ ಮೂಲಕ ಕೆಡುಕನ್ನು ತಡೆಯುವವರು. ಪರಲೋಕ ಭವನವಿರುವುದು ಇಂತಹವರಿಗೇ ಆಗಿದೆ.
アラビア語 クルアーン注釈:
جَنّٰتُ عَدْنٍ یَّدْخُلُوْنَهَا وَمَنْ صَلَحَ مِنْ اٰبَآىِٕهِمْ وَاَزْوَاجِهِمْ وَذُرِّیّٰتِهِمْ وَالْمَلٰٓىِٕكَةُ یَدْخُلُوْنَ عَلَیْهِمْ مِّنْ كُلِّ بَابٍ ۟ۚ
(ಅಂದರೆ) ಶಾಶ್ವತ ವಾಸ್ತವ್ಯದ ಸ್ವರ್ಗೋದ್ಯಾನಗಳು! ಅವರು ಅದನ್ನು ಪ್ರವೇಶಿಸುವರು. ಅವರ ಪೂರ್ವಜರು, ಪತ್ನಿಯರು ಮತ್ತು ಮಕ್ಕಳಲ್ಲಿ ನೀತಿವಂತರಾಗಿರುವವರು ಕೂಡ (ಅದನ್ನು ಪ್ರವೇಶಿಸುವರು). ದೇವದೂತರುಗಳು ಎಲ್ಲಾ ದ್ವಾರಗಳಿಂದಲೂ ಅವರ ಬಳಿಗೆ ಬರುವರು.
アラビア語 クルアーン注釈:
سَلٰمٌ عَلَیْكُمْ بِمَا صَبَرْتُمْ فَنِعْمَ عُقْبَی الدَّارِ ۟ؕ
(ದೇವದೂತರುಗಳು ಹೇಳುವರು): “ನಿಮಗೆ ಶಾಂತಿಯಿರಲಿ! ಇದು ನಿಮ್ಮ ತಾಳ್ಮೆಗೆ ಪ್ರತಿಫಲವಾಗಿದೆ.” ಆ ಪರಲೋಕ ಭವನವು ಬಹಳ ಉತ್ತಮವಾಗಿದೆ.
アラビア語 クルアーン注釈:
وَالَّذِیْنَ یَنْقُضُوْنَ عَهْدَ اللّٰهِ مِنْ بَعْدِ مِیْثَاقِهٖ وَیَقْطَعُوْنَ مَاۤ اَمَرَ اللّٰهُ بِهٖۤ اَنْ یُّوْصَلَ وَیُفْسِدُوْنَ فِی الْاَرْضِ ۙ— اُولٰٓىِٕكَ لَهُمُ اللَّعْنَةُ وَلَهُمْ سُوْٓءُ الدَّارِ ۟
ಅಲ್ಲಾಹನ ಕರಾರನ್ನು ಅದು ಸದೃಢವಾದ ಬಳಿಕವೂ ಮುರಿಯುವವರು, ಅಲ್ಲಾಹು ಜೋಡಿಸಲು ಆದೇಶಿಸಿದ್ದನ್ನು ಕಡಿಯುವವರು ಮತ್ತು ಭೂಮಿಯಲ್ಲಿ ಕಿಡಿಗೇಡಿತನ ಮಾಡುವವರು ಯಾರೋ—ಅವರಿಗೆ ಶಾಪವಿದೆ. ಅವರಿಗೆ ಕೆಟ್ಟ ಭವನವಿದೆ.
アラビア語 クルアーン注釈:
اَللّٰهُ یَبْسُطُ الرِّزْقَ لِمَنْ یَّشَآءُ وَیَقْدِرُ ؕ— وَفَرِحُوْا بِالْحَیٰوةِ الدُّنْیَا ؕ— وَمَا الْحَیٰوةُ الدُّنْیَا فِی الْاٰخِرَةِ اِلَّا مَتَاعٌ ۟۠
ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು (ಅವನು ಇಚ್ಛಿಸುವವರಿಗೆ) ಕುಗ್ಗಿಸುತ್ತಾನೆ. ಅವರು ಇಹಲೋಕ ಜೀವನವನ್ನು ಆನಂದಿಸುತ್ತಾರೆ. ಪರಲೋಕಕ್ಕೆ ಹೋಲಿಸಿದರೆ ಇಹಲೋಕ ಜೀವನವು ಒಂದು (ತಾತ್ಕಾಲಿಕ) ಆನಂದ ಮಾತ್ರವಾಗಿದೆ.
アラビア語 クルアーン注釈:
وَیَقُوْلُ الَّذِیْنَ كَفَرُوْا لَوْلَاۤ اُنْزِلَ عَلَیْهِ اٰیَةٌ مِّنْ رَّبِّهٖ ؕ— قُلْ اِنَّ اللّٰهَ یُضِلُّ مَنْ یَّشَآءُ وَیَهْدِیْۤ اِلَیْهِ مَنْ اَنَابَ ۟ۖۚ
ಸತ್ಯನಿಷೇಧಿಗಳು ಕೇಳುತ್ತಾರೆ: “ಇವನಿಗೆ ಇವನ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಲಾಗಿಲ್ಲ?” ಹೇಳಿರಿ: “ಅಲ್ಲಾಹು ಅವನು ಇಚ್ಛಿಸುವವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನ ಕಡೆಗೆ ತಿರುಗಿದವರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ.”
アラビア語 クルアーン注釈:
اَلَّذِیْنَ اٰمَنُوْا وَتَطْمَىِٕنُّ قُلُوْبُهُمْ بِذِكْرِ اللّٰهِ ؕ— اَلَا بِذِكْرِ اللّٰهِ تَطْمَىِٕنُّ الْقُلُوْبُ ۟ؕ
ಸತ್ಯವಿಶ್ವಾಸಿಗಳು ಮತ್ತು ಅಲ್ಲಾಹನ ಸ್ಮರಣೆಯಿಂದ ಹೃದಯಗಳು ಶಾಂತವಾಗುವವರು. ತಿಳಿಯಿರಿ! ಅಲ್ಲಾಹನ ಸ್ಮರಣೆಯಿಂದಲೇ ಹೃದಯಗಳು ಶಾಂತವಾಗುತ್ತವೆ.
アラビア語 クルアーン注釈:
اَلَّذِیْنَ اٰمَنُوْا وَعَمِلُوا الصّٰلِحٰتِ طُوْبٰی لَهُمْ وَحُسْنُ مَاٰبٍ ۟
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಮಂಗಳಮಯ ಸ್ಥಿತಿಯಿದೆ; ಅತ್ಯುತ್ತಮ ವಾಸ್ತವ್ಯವೂ ಇದೆ.
アラビア語 クルアーン注釈:
كَذٰلِكَ اَرْسَلْنٰكَ فِیْۤ اُمَّةٍ قَدْ خَلَتْ مِنْ قَبْلِهَاۤ اُمَمٌ لِّتَتْلُوَاۡ عَلَیْهِمُ الَّذِیْۤ اَوْحَیْنَاۤ اِلَیْكَ وَهُمْ یَكْفُرُوْنَ بِالرَّحْمٰنِ ؕ— قُلْ هُوَ رَبِّیْ لَاۤ اِلٰهَ اِلَّا هُوَ ۚ— عَلَیْهِ تَوَكَّلْتُ وَاِلَیْهِ مَتَابِ ۟
ಈ ರೀತಿಯಲ್ಲಿ ನಾವು ನಿಮ್ಮನ್ನು ಒಂದು ಸಮುದಾಯಕ್ಕೆ ಸಂದೇಶವಾಹಕರನ್ನಾಗಿ ಕಳುಹಿಸಿದ್ದೇವೆ—ಅದಕ್ಕಿಂತ ಮೊದಲು ಅನೇಕ ಸಮುದಾಯಗಳು ಕಳೆದು ಹೋಗಿವೆ—ನಾವು ನಿಮಗೆ ನೀಡಿದ ದೇವವಾಣಿಗಳನ್ನು ಅವರಿಗೆ ಓದಿಕೊಡುವುದಕ್ಕಾಗಿ. ಅವರು ಪರಮ ದಯಾಮಯನನ್ನು (ಅಲ್ಲಾಹನನ್ನು) ನಿಷೇಧಿಸುತ್ತಾರೆ. ಹೇಳಿರಿ: “ಅವನೇ ನನ್ನ ಪರಿಪಾಲಕನು. ಅವನ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ನಾನು ಅವನಲ್ಲಿ ಭರವಸೆಯಿಟ್ಟಿದ್ದೇನೆ. ನಾನು ಮರಳಿಹೋಗುವುದು ಅವನ ಬಳಿಗೇ ಆಗಿದೆ.”
アラビア語 クルアーン注釈:
وَلَوْ اَنَّ قُرْاٰنًا سُیِّرَتْ بِهِ الْجِبَالُ اَوْ قُطِّعَتْ بِهِ الْاَرْضُ اَوْ كُلِّمَ بِهِ الْمَوْتٰی ؕ— بَلْ لِّلّٰهِ الْاَمْرُ جَمِیْعًا ؕ— اَفَلَمْ یَایْـَٔسِ الَّذِیْنَ اٰمَنُوْۤا اَنْ لَّوْ یَشَآءُ اللّٰهُ لَهَدَی النَّاسَ جَمِیْعًا ؕ— وَلَا یَزَالُ الَّذِیْنَ كَفَرُوْا تُصِیْبُهُمْ بِمَا صَنَعُوْا قَارِعَةٌ اَوْ تَحُلُّ قَرِیْبًا مِّنْ دَارِهِمْ حَتّٰی یَاْتِیَ وَعْدُ اللّٰهِ ؕ— اِنَّ اللّٰهَ لَا یُخْلِفُ الْمِیْعَادَ ۟۠
ಯಾವುದೇ ಕುರ್‌ಆನಿನ (ದೈವಿಕ ಗ್ರಂಥದ) ಮೂಲಕ ಬೆಟ್ಟಗಳನ್ನು ಚಲಿಸುವಂತೆ, ಭೂಮಿ ನುಚ್ಚುನೂರಾಗುವಂತೆ, ಅಥವಾ ಸತ್ತವನು ಮಾತನಾಡುವಂತೆ ಮಾಡಲಾದರೂ (ಅವರು ಸತ್ಯವಿಶ್ವಾಸಿಗಳಾಗಲಾರರು). ವಾಸ್ತವವಾಗಿ, ಎಲ್ಲವೂ ಅಲ್ಲಾಹನ ನಿಯಂತ್ರಣದಲ್ಲಿವೆ. ಅಲ್ಲಾಹು ಇಚ್ಛಿಸುತ್ತಿದ್ದರೆ ಮನುಷ್ಯರೆಲ್ಲರನ್ನೂ ಅವನು ಸನ್ಮಾರ್ಗದಲ್ಲಿ ಸೇರಿಸುತ್ತಿದ್ದನೆಂದು ಸತ್ಯವಿಶ್ವಾಸಿಗಳಿಗೆ ತಿಳಿದಿಲ್ಲವೇ? ಸತ್ಯನಿಷೇಧಿಗಳಿಗೆ ಅವರು ಮಾಡಿದ ದುಷ್ಕರ್ಮಗಳ ನಿಮಿತ್ತ ಯಾವುದಾದರೂ ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ. ಅಥವಾ ಅವರ ಮನೆಗಳ ಸಮೀಪವೇ ಅದು ಎರಗಬಹುದು. ಎಲ್ಲಿಯವರೆಗೆಂದರೆ, ಅಲ್ಲಾಹನ ವಾಗ್ದಾನವು ಬರುವ ತನಕ. ನಿಶ್ಚಯವಾಗಿಯೂ ಅಲ್ಲಾಹು ವಾಗ್ದಾನಗಳನ್ನು ಉಲ್ಲಂಘಿಸುವುದಿಲ್ಲ.
アラビア語 クルアーン注釈:
وَلَقَدِ اسْتُهْزِئَ بِرُسُلٍ مِّنْ قَبْلِكَ فَاَمْلَیْتُ لِلَّذِیْنَ كَفَرُوْا ثُمَّ اَخَذْتُهُمْ ۫— فَكَیْفَ كَانَ عِقَابِ ۟
ನಿಮಗಿಂತ ಮೊದಲು ಕೂಡ ಸಂದೇಶವಾಹಕರುಗಳು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಆಗಲೂ ನಾನು ಸತ್ಯನಿಷೇಧಿಗಳಿಗೆ ಕಾಲಾವಕಾಶ ನೀಡಿದ್ದೆ. ನಂತರ ಅವರನ್ನು ಹಿಡಿದು ಬಿಟ್ಟೆ. ಆಗ ನನ್ನ ಶಿಕ್ಷೆ ಹೇಗಿತ್ತು?
アラビア語 クルアーン注釈:
اَفَمَنْ هُوَ قَآىِٕمٌ عَلٰی كُلِّ نَفْسٍ بِمَا كَسَبَتْ ۚ— وَجَعَلُوْا لِلّٰهِ شُرَكَآءَ ؕ— قُلْ سَمُّوْهُمْ ؕ— اَمْ تُنَبِّـُٔوْنَهٗ بِمَا لَا یَعْلَمُ فِی الْاَرْضِ اَمْ بِظَاهِرٍ مِّنَ الْقَوْلِ ؕ— بَلْ زُیِّنَ لِلَّذِیْنَ كَفَرُوْا مَكْرُهُمْ وَصُدُّوْا عَنِ السَّبِیْلِ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟
ಪ್ರತಿಯೊಬ್ಬ ಮನುಷ್ಯನು ಮಾಡಿದ ಕರ್ಮಗಳ ಮೇಲ್ನೋಟ ವಹಿಸುವ ಅಲ್ಲಾಹು (ಏನೂ ತಿಳಿಯದವನೇ?) ಅವರು (ಇತರ ದೇವರುಗಳನ್ನು) ಅಲ್ಲಾಹನಿಗೆ ಸಹಭಾಗಿಗಳಾಗಿ ಮಾಡಿದರು. ಹೇಳಿರಿ: “ಅವರ ಹೆಸರನ್ನು ಹೇಳಿರಿ. ಭೂಮಿಯಲ್ಲಿ ಅಲ್ಲಾಹನಿಗೆ ತಿಳಿಯದಿರುವ ವಿಷಯವನ್ನು ನೀವು ಅವನಿಗೆ ತಿಳಿಸುತ್ತಿದ್ದೀರಾ? ಅಥವಾ ನೀವು ಕೇವಲ ಊಹಿಸಿ ಹಾಗೆ ಹೇಳುತ್ತಿದ್ದೀರಾ?”[1] ಅಲ್ಲ, ವಾಸ್ತವವಾಗಿ ಸತ್ಯನಿಷೇಧಿಗಳಿಗೆ ಅವರ ತಂತ್ರಗಳನ್ನು ಆಕರ್ಷಕವಾಗಿ ತೋರಿಸಲಾಗಿದೆ ಮತ್ತು ಅವರನ್ನು ಸತ್ಯಮಾರ್ಗದಿಂದ ತಡೆಯಲಾಗಿದೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ದಾರಿ ತೋರಿಸುವವರು ಯಾರೂ ಇಲ್ಲ.
[1] ಅಂದರೆ ಅಲ್ಲಾಹನ ಹೊರತು ಬೇರೆ ದೇವರುಗಳಿದ್ದಾರೆಂಬ ವಿಷಯ ಅಲ್ಲಾಹನಿಗೆ ತಿಳಿದಿಲ್ಲ. ನೀವು ಆರಾಧಿಸುತ್ತಿರುವ ವಿಗ್ರಹಗಳು ದೇವರುಗಳೆಂಬುದಕ್ಕೆ ಯಾವುದೇ ಆಧಾರವಿಲ್ಲ. ನೀವು ಹೇಳುತ್ತಿರುವ ನಿಮ್ಮ ದೇವರುಗಳ ಹೆಸರುಗಳನ್ನು ಅಲ್ಲಾಹು ಅವನ ಗ್ರಂಥಗಳಲ್ಲಿ ಅವತೀರ್ಣಗೊಳಿಸಿಲ್ಲ. ಅವು ನೀವು ಮತ್ತು ಪೂರ್ವಜರು ಇಟ್ಟ ಹೆಸರುಗಳಾಗಿವೆ.
アラビア語 クルアーン注釈:
لَهُمْ عَذَابٌ فِی الْحَیٰوةِ الدُّنْیَا وَلَعَذَابُ الْاٰخِرَةِ اَشَقُّ ۚ— وَمَا لَهُمْ مِّنَ اللّٰهِ مِنْ وَّاقٍ ۟
ಅವರಿಗೆ ಇಹಲೋಕದಲ್ಲೂ ಶಿಕ್ಷೆಯಿದೆ. ಪರಲೋಕದ ಶಿಕ್ಷೆಯಂತೂ ಅತಿಕಠೋರವಾಗಿದೆ. ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುವವರು ಯಾರೂ ಇಲ್ಲ.
アラビア語 クルアーン注釈:
مَثَلُ الْجَنَّةِ الَّتِیْ وُعِدَ الْمُتَّقُوْنَ ؕ— تَجْرِیْ مِنْ تَحْتِهَا الْاَنْهٰرُ ؕ— اُكُلُهَا دَآىِٕمٌ وَّظِلُّهَا ؕ— تِلْكَ عُقْبَی الَّذِیْنَ اتَّقَوْا ۖۗ— وَّعُقْبَی الْكٰفِرِیْنَ النَّارُ ۟
ದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಸ್ವರ್ಗವು ಹೇಗಿದೆಯೆಂದರೆ, ಅದರ ತಳಭಾಗದಲ್ಲಿ ನದಿಗಳು ಹರಿಯುತ್ತಿವೆ. ಅದರ ಹಣ್ಣುಗಳು ಮತ್ತು ನೆರಳು ಶಾಶ್ವತವಾಗಿವೆ. ಅದು ದೇವಭಯವುಳ್ಳವರ ಅಂತಿಮ ಸ್ಥಿತಿಯಾಗಿದೆ! ಸತ್ಯನಿಷೇಧಿಗಳ ಅಂತಿಮ ಸ್ಥಿತಿಯು ನರಕಾಗ್ನಿಯಾಗಿದೆ.
アラビア語 クルアーン注釈:
وَالَّذِیْنَ اٰتَیْنٰهُمُ الْكِتٰبَ یَفْرَحُوْنَ بِمَاۤ اُنْزِلَ اِلَیْكَ وَمِنَ الْاَحْزَابِ مَنْ یُّنْكِرُ بَعْضَهٗ ؕ— قُلْ اِنَّمَاۤ اُمِرْتُ اَنْ اَعْبُدَ اللّٰهَ وَلَاۤ اُشْرِكَ بِهٖ ؕ— اِلَیْهِ اَدْعُوْا وَاِلَیْهِ مَاٰبِ ۟
ನಾವು (ಇದಕ್ಕೆ ಮೊದಲು) ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು ನಿಮಗೆ ಅವತೀರ್ಣವಾದ ಈ ಗ್ರಂಥದ ಬಗ್ಗೆ ಸಂತಸಪಡುತ್ತಾರೆ. ಅದರ ಕೆಲವು ಭಾಗಗಳನ್ನು ನಿಷೇಧಿಸುವ ಪಂಗಡಗಳೂ ಅವರಲ್ಲಿವೆ. ಹೇಳಿರಿ: “ಅಲ್ಲಾಹನನ್ನು ಮಾತ್ರ ಆರಾಧಿಸಬೇಕು ಮತ್ತು ಅವನೊಂದಿಗೆ ಏನೂ ಸಹಭಾಗಿತ್ವ (ಶಿರ್ಕ್) ಮಾಡಬಾರದೆಂದು ನನಗೆ ಆಜ್ಞಾಪಿಸಲಾಗಿದೆ. ನಾನು ಅವನ ಕಡೆಗೇ ಕರೆಯುತ್ತಿದ್ದೇನೆ. ನಾನು ಮರಳಿಹೋಗುವುದು ಕೂಡ ಅವನ ಬಳಿಗೇ ಆಗಿದೆ.”
アラビア語 クルアーン注釈:
وَكَذٰلِكَ اَنْزَلْنٰهُ حُكْمًا عَرَبِیًّا ؕ— وَلَىِٕنِ اتَّبَعْتَ اَهْوَآءَهُمْ بَعْدَ مَا جَآءَكَ مِنَ الْعِلْمِ ۙ— مَا لَكَ مِنَ اللّٰهِ مِنْ وَّلِیٍّ وَّلَا وَاقٍ ۟۠
ಈ ರೀತಿ ನಾವು ಈ ಕುರ್‌ಆನನ್ನು ಅರಬ್ಬಿ ಭಾಷೆಯಲ್ಲಿರುವ ಆಜ್ಞೆಯಾಗಿ ಅವತೀರ್ಣಗೊಳಿಸಿದ್ದೇವೆ. ನಿಮಗೆ ಜ್ಞಾನ ಬಂದ ಬಳಿಕವೂ ನೀವು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ನಿಮ್ಮನ್ನು ಅಲ್ಲಾಹನ ಶಿಕ್ಷೆಯಿಂದ ಪಾರು ಮಾಡುವ ಯಾವುದೇ ಸಹಾಯಕರು ಅಥವಾ ರಕ್ಷಕರು ಇರಲಾರರು.
アラビア語 クルアーン注釈:
وَلَقَدْ اَرْسَلْنَا رُسُلًا مِّنْ قَبْلِكَ وَجَعَلْنَا لَهُمْ اَزْوَاجًا وَّذُرِّیَّةً ؕ— وَمَا كَانَ لِرَسُوْلٍ اَنْ یَّاْتِیَ بِاٰیَةٍ اِلَّا بِاِذْنِ اللّٰهِ ؕ— لِكُلِّ اَجَلٍ كِتَابٌ ۟
ನಿಮಗಿಂತ ಮೊದಲೂ ನಾವು ಸಂದೇಶವಾಹಕರುಗಳನ್ನು ಕಳುಹಿಸಿದ್ದೇವೆ. ಅವರಿಗೆ ನಾವು ಪತ್ನಿ-ಮಕ್ಕಳನ್ನು ನೀಡಿದ್ದೇವೆ. ಅಲ್ಲಾಹನ ಅಪ್ಪಣೆಯಿಲ್ಲದೆ ಯಾವುದೇ ಒಂದು ದೃಷ್ಟಾಂತವನ್ನು ತರಲು ಸಂದೇಶವಾಹಕರಲ್ಲಿ ಯಾರಿಗೂ ಸಾಧ್ಯವಿಲ್ಲ. ಎಲ್ಲಾ ನಿಶ್ಚಿತ ವಾಗ್ದಾನಗಳಿಗೂ ಒಂದು ಲಿಖಿತ ಸಮಯವಿದೆ.
アラビア語 クルアーン注釈:
یَمْحُوا اللّٰهُ مَا یَشَآءُ وَیُثْبِتُ ۖۚ— وَعِنْدَهٗۤ اُمُّ الْكِتٰبِ ۟
ಅಲ್ಲಾಹು ಅವನು ಇಚ್ಛಿಸುವುದನ್ನು ಅಳಿಸುತ್ತಾನೆ ಮತ್ತು (ಅವನು ಇಚ್ಛಿಸುವುದನ್ನು) ಸ್ಥಿರಗೊಳಿಸುತ್ತಾನೆ. ಮೂಲಗ್ರಂಥವು ಅವನ ಬಳಿಯಲ್ಲಿದೆ.
アラビア語 クルアーン注釈:
وَاِنْ مَّا نُرِیَنَّكَ بَعْضَ الَّذِیْ نَعِدُهُمْ اَوْ نَتَوَفَّیَنَّكَ فَاِنَّمَا عَلَیْكَ الْبَلٰغُ وَعَلَیْنَا الْحِسَابُ ۟
ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮ ಆತ್ಮವನ್ನು ವಶಪಡಿಸಿದರೂ ನಿಮ್ಮ ಕರ್ತವ್ಯವು ಸಂದೇಶವನ್ನು ತಲುಪಿಸುವುದು ಮಾತ್ರ. ವಿಚಾರಣೆ ಮಾಡಬೇಕಾದುದು ನಮ್ಮ ಹೊಣೆಯಾಗಿದೆ.
アラビア語 クルアーン注釈:
اَوَلَمْ یَرَوْا اَنَّا نَاْتِی الْاَرْضَ نَنْقُصُهَا مِنْ اَطْرَافِهَا ؕ— وَاللّٰهُ یَحْكُمُ لَا مُعَقِّبَ لِحُكْمِهٖ ؕ— وَهُوَ سَرِیْعُ الْحِسَابِ ۟
ನಾವು ಭೂಮಿಯನ್ನು ಅದರ ಕಿನಾರೆಗಳಿಂದ ಕುಗ್ಗಿಸುವುದನ್ನು ಅವರು ನೋಡುವುದಿಲ್ಲವೇ?[1] ಅಲ್ಲಾಹು ತೀರ್ಪು ನೀಡುತ್ತಾನೆ. ಅವನ ತೀರ್ಪನ್ನು ಹಿಂದಿಕ್ಕಲು (ರದ್ದು ಮಾಡಲು) ಯಾರಿಗೂ ಸಾಧ್ಯವಿಲ್ಲ. ಅವನು ಶೀಘ್ರವಾಗಿ ವಿಚಾರಣೆ ಮಾಡುತ್ತಾನೆ.
[1] ಅಂದರೆ ಸತ್ಯನಿಷೇಧಿಗಳ ವಶದಲ್ಲಿರುವ ಪ್ರದೇಶಗಳು ಕುಗ್ಗುವುದನ್ನು ಮತ್ತು ಸತ್ಯವಿಶ್ವಾಸಿಗಳ ವಶದಲ್ಲಿರುವ ಪ್ರದೇಶಗಳು ಹಿಗ್ಗುವುದನ್ನು ಅವರು ನೋಡುವುದಿಲ್ಲವೇ?
アラビア語 クルアーン注釈:
وَقَدْ مَكَرَ الَّذِیْنَ مِنْ قَبْلِهِمْ فَلِلّٰهِ الْمَكْرُ جَمِیْعًا ؕ— یَعْلَمُ مَا تَكْسِبُ كُلُّ نَفْسٍ ؕ— وَسَیَعْلَمُ الْكُفّٰرُ لِمَنْ عُقْبَی الدَّارِ ۟
ಇವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆದರೆ ತಂತ್ರಗಾರಿಕೆಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಪ್ರತಿಯೊಬ್ಬ ಮನುಷ್ಯನು ಮಾಡುವ ಕರ್ಮಗಳನ್ನು ಅವನು ತಿಳಿಯುತ್ತಾನೆ. ಅಂತಿಮ ಭವನವು ಯಾರಿಗೆ ದೊರೆಯಲಿದೆಯೆಂದು ಸತ್ಯನಿಷೇಧಿಗಳು ಸದ್ಯವೇ ತಿಳಿಯುವರು.
アラビア語 クルアーン注釈:
وَیَقُوْلُ الَّذِیْنَ كَفَرُوْا لَسْتَ مُرْسَلًا ؕ— قُلْ كَفٰی بِاللّٰهِ شَهِیْدًا بَیْنِیْ وَبَیْنَكُمْ ۙ— وَمَنْ عِنْدَهٗ عِلْمُ الْكِتٰبِ ۟۠
ಸತ್ಯನಿಷೇಧಿಗಳು ಹೇಳುತ್ತಾರೆ: “ನೀನು ಸಂದೇಶವಾಹಕನಲ್ಲ.” ಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿ ನುಡಿಯಲು ಅಲ್ಲಾಹು ಸಾಕು. ಯಾರ ಬಳಿ ಗ್ರಂಥದ ಜ್ಞಾನವಿದೆಯೋ ಅವರೂ ಸಾಕು.”
アラビア語 クルアーン注釈:
 
対訳 章: 雷電章
章名の目次 ページ番号
 
クルアーンの対訳 - الترجمة الكنادية - 対訳の目次

ترجمة معاني القرآن الكريم إلى اللغة الكنادية ترجمها محمد حمزة بتور.

閉じる