Check out the new design

ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ * - សន្ទស្សន៍នៃការបកប្រែ

PDF XML CSV Excel API
Please review the Terms and Policies

ការបកប្រែអត្ថន័យ ជំពូក​: អាន់ណះល៍   អាយ៉ាត់:
یَوْمَ تَاْتِیْ كُلُّ نَفْسٍ تُجَادِلُ عَنْ نَّفْسِهَا وَتُوَفّٰی كُلُّ نَفْسٍ مَّا عَمِلَتْ وَهُمْ لَا یُظْلَمُوْنَ ۟
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರವಾಗಿ ತರ್ಕಿಸುತ್ತಾ ಬರುವ ಮತ್ತು ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳಿಗೆ ಪೂರ್ಣ ಪ್ರತಿಫಲವನ್ನು ನೀಡಲಾಗುವ ದಿನ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.
តាហ្វសៀរជាភាសា​អារ៉ាប់ជាច្រេីន:
وَضَرَبَ اللّٰهُ مَثَلًا قَرْیَةً كَانَتْ اٰمِنَةً مُّطْمَىِٕنَّةً یَّاْتِیْهَا رِزْقُهَا رَغَدًا مِّنْ كُلِّ مَكَانٍ فَكَفَرَتْ بِاَنْعُمِ اللّٰهِ فَاَذَاقَهَا اللّٰهُ لِبَاسَ الْجُوْعِ وَالْخَوْفِ بِمَا كَانُوْا یَصْنَعُوْنَ ۟
ಅಲ್ಲಾಹು ಒಂದು ಉದಾಹರಣೆಯನ್ನು ಕೊಡುತ್ತಾನೆ. ನಿರ್ಭಯ ಮತ್ತು ನೆಮ್ಮದಿಯಾಗಿದ್ದ ಒಂದು ಊರು. ಅದಕ್ಕೆ ಎಲ್ಲಾ ಕಡೆಗಳಿಂದಲೂ ಯಥೇಷ್ಟ ಆಹಾರ ಸಾಮಗ್ರಿಗಳು ಬರುತ್ತಿದ್ದವು. ಆದರೆ ಅವರು ಅಲ್ಲಾಹನ ಅನುಗ್ರಹಗಳನ್ನು ನಿಷೇಧಿಸಿದರು. ಆಗ ಅಲ್ಲಾಹು ಅವರಿಗೆ ಹಸಿವು ಮತ್ತು ಭಯದ ವಾತಾವರಣವನ್ನು ಅನುಭವಿಸುವಂತೆ ಮಾಡಿದನು. ಇದು ಅವರು ಮಾಡಿದ ಕರ್ಮಗಳ ಫಲವಾಗಿತ್ತು.
តាហ្វសៀរជាភាសា​អារ៉ាប់ជាច្រេីន:
وَلَقَدْ جَآءَهُمْ رَسُوْلٌ مِّنْهُمْ فَكَذَّبُوْهُ فَاَخَذَهُمُ الْعَذَابُ وَهُمْ ظٰلِمُوْنَ ۟
ಅವರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರು ಬಂದಿದ್ದರು. ಆದರೆ ಅವರು ಆ ಸಂದೇಶವಾಹಕರನ್ನು ನಿಷೇಧಿಸಿದರು. ಆಗ ಅವರು ಅಕ್ರಮವೆಸಗುತ್ತಿದ್ದಾಗಲೇ ಶಿಕ್ಷೆಯು ಅವರನ್ನು ಹಿಡಿದುಕೊಂಡಿತು.
តាហ្វសៀរជាភាសា​អារ៉ាប់ជាច្រេីន:
فَكُلُوْا مِمَّا رَزَقَكُمُ اللّٰهُ حَلٰلًا طَیِّبًا ۪— وَّاشْكُرُوْا نِعْمَتَ اللّٰهِ اِنْ كُنْتُمْ اِیَّاهُ تَعْبُدُوْنَ ۟
ಅಲ್ಲಾಹು ನಿಮಗೆ ಒದಗಿಸಿದ ಧರ್ಮಸಮ್ಮತ ಮತ್ತು ಶುದ್ಧ ವಸ್ತುಗಳನ್ನು ತಿನ್ನಿರಿ. ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿರಿ. ನೀವು ಅವನನ್ನು ಮಾತ್ರ ಆರಾಧಿಸುವವರಾಗಿದ್ದರೆ.
តាហ្វសៀរជាភាសា​អារ៉ាប់ជាច្រេីន:
اِنَّمَا حَرَّمَ عَلَیْكُمُ الْمَیْتَةَ وَالدَّمَ وَلَحْمَ الْخِنْزِیْرِ وَمَاۤ اُهِلَّ لِغَیْرِ اللّٰهِ بِهٖ ۚ— فَمَنِ اضْطُرَّ غَیْرَ بَاغٍ وَّلَا عَادٍ فَاِنَّ اللّٰهَ غَفُوْرٌ رَّحِیْمٌ ۟
ಅವನು ನಿಮಗೆ ಶವ, ರಕ್ತ, ಹಂದಿ ಮಾಂಸ ಮತ್ತು ಅಲ್ಲಾಹೇತರರ ಹೆಸರನ್ನು ಘೋಷಿಸಲಾದ ವಸ್ತುಗಳನ್ನು ಮಾತ್ರ ನಿಷೇಧಿಸಿದ್ದಾನೆ. ಆದರೆ ಯಾರಾದರೂ (ಇವುಗಳನ್ನು ಸೇವಿಸಲು) ನಿರ್ಬಂಧಿತನಾದರೆ ಅವನ ಮೇಲೆ ದೋಷವಿಲ್ಲ. ಆದರೆ ಅವನು ಅಗತ್ಯಕ್ಕಿಂತ ಹೆಚ್ಚು ಸೇವಿಸಬಾರದು ಮತ್ತು (ಅಲ್ಲಾಹು ಅನುಮತಿಸಿದ) ಎಲ್ಲೆಯನ್ನು ಮೀರಬಾರದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
តាហ្វសៀរជាភាសា​អារ៉ាប់ជាច្រេីន:
وَلَا تَقُوْلُوْا لِمَا تَصِفُ اَلْسِنَتُكُمُ الْكَذِبَ هٰذَا حَلٰلٌ وَّهٰذَا حَرَامٌ لِّتَفْتَرُوْا عَلَی اللّٰهِ الْكَذِبَ ؕ— اِنَّ الَّذِیْنَ یَفْتَرُوْنَ عَلَی اللّٰهِ الْكَذِبَ لَا یُفْلِحُوْنَ ۟ؕ
ನೀವು ಯಾವುದೇ ವಸ್ತುವನ್ನೂ ನಿಮ್ಮ ನಾಲಗೆಗಳಿಂದ ಸುಳ್ಳು ಸುಳ್ಳಾಗಿ “ಇದು ಧರ್ಮಸಮ್ಮತ ಮತ್ತು ಇದು ಧರ್ಮನಿಷಿದ್ಧ” ಎಂದು ಹೇಳಬೇಡಿ. ಇದರಿಂದ ನೀವು ಅಲ್ಲಾಹನ ಮೇಲೆ ಸುಳ್ಳು ಆರೋಪಿಸಿದವರಾಗುವಿರಿ. ಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವರು ಖಂಡಿತ ಯಶಸ್ವಿಯಾಗುವುದಿಲ್ಲ.
តាហ្វសៀរជាភាសា​អារ៉ាប់ជាច្រេីន:
مَتَاعٌ قَلِیْلٌ ۪— وَّلَهُمْ عَذَابٌ اَلِیْمٌ ۟
ಅವರಿಗಿರುವುದು ತಾತ್ಕಾಲಿಕ ಆನಂದ ಮಾತ್ರ. (ಪರಲೋಕದಲ್ಲಿ) ಅವರಿಗೆ ಯಾತನಾಮಯ ಶಿಕ್ಷೆಯಿದೆ.
តាហ្វសៀរជាភាសា​អារ៉ាប់ជាច្រេីន:
وَعَلَی الَّذِیْنَ هَادُوْا حَرَّمْنَا مَا قَصَصْنَا عَلَیْكَ مِنْ قَبْلُ ۚ— وَمَا ظَلَمْنٰهُمْ وَلٰكِنْ كَانُوْۤا اَنْفُسَهُمْ یَظْلِمُوْنَ ۟
(ಪ್ರವಾದಿಯವರೇ) ನಾವು ನಿಮಗೆ ಇದಕ್ಕೆ ಮೊದಲು ತಿಳಿಸಿಕೊಟ್ಟ ವಸ್ತುಗಳನ್ನು ನಾವು ಯಹೂದಿಗಳಿಗೆ ನಿಷೇಧಿಸಿದ್ದೇವೆ.[1] ನಾವು ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡುತ್ತಿದ್ದಾರೆ.
[1] ನೋಡಿ 6:146
តាហ្វសៀរជាភាសា​អារ៉ាប់ជាច្រេីន:
 
ការបកប្រែអត្ថន័យ ជំពូក​: អាន់ណះល៍
សន្ទស្សន៍នៃជំពូក លេខ​ទំព័រ
 
ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ - សន្ទស្សន៍នៃការបកប្រែ

បានបកប្រែដោយ​មុហាម៉ាត់ ហាំហ្សា បេតួរ។ បានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ