ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ: 412:411 close

external-link copy
20 : 31

اَلَمْ تَرَوْا اَنَّ اللّٰهَ سَخَّرَ لَكُمْ مَّا فِی السَّمٰوٰتِ وَمَا فِی الْاَرْضِ وَاَسْبَغَ عَلَیْكُمْ نِعَمَهٗ ظَاهِرَةً وَّبَاطِنَةً ؕ— وَمِنَ النَّاسِ مَنْ یُّجَادِلُ فِی اللّٰهِ بِغَیْرِ عِلْمٍ وَّلَا هُدًی وَّلَا كِتٰبٍ مُّنِیْرٍ ۟

ಭೂಮ್ಯಾಕಾಶಗಳಲ್ಲಿರುವ ಎಲ್ಲವನ್ನೂ ಅಲ್ಲಾಹು ನಿಮಗೆ ಅಧೀನಗೊಳಿಸಿದ್ದಾನೆಂದು ನೀವು ನೋಡಿಲ್ಲವೇ? ಅವನು ನಿಮಗೆ ಗೋಚರ ಮತ್ತು ಅಗೋಚರವಾದ ಹೇರಳ ಅನುಗ್ರಹಗಳನ್ನು ದಯಪಾಲಿಸಿದ್ದಾನೆ. ಜನರಲ್ಲಿ ಕೆಲವರಿದ್ದಾರೆ. ಅವರು ಯಾವುದೇ ಜ್ಞಾನ, ಮಾರ್ಗದರ್ಶನ ಅಥವಾ ಬೆಳಕು ನೀಡುವ ಗ್ರಂಥದ ಆಧಾರವಿಲ್ಲದೆ ಅಲ್ಲಾಹನ ಬಗ್ಗೆ ತರ್ಕಿಸುತ್ತಾರೆ. info
التفاسير:

external-link copy
21 : 31

وَاِذَا قِیْلَ لَهُمُ اتَّبِعُوْا مَاۤ اَنْزَلَ اللّٰهُ قَالُوْا بَلْ نَتَّبِعُ مَا وَجَدْنَا عَلَیْهِ اٰبَآءَنَا ؕ— اَوَلَوْ كَانَ الشَّیْطٰنُ یَدْعُوْهُمْ اِلٰی عَذَابِ السَّعِیْرِ ۟

“ಅಲ್ಲಾಹು ಅವತೀರ್ಣಗೊಳಿಸಿದ್ದನ್ನು ಅನುಸರಿಸಿರಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ಇಲ್ಲ, ನಮ್ಮ ಪೂರ್ವಜರು ಯಾವ ಮಾರ್ಗದಲ್ಲಿರುವುದಾಗಿ ನಾವು ಕಂಡಿದ್ದೇವೆಯೋ ಆ ಮಾರ್ಗವನ್ನೇ ನಾವು ಅನುಸರಿಸುತ್ತೇವೆ.” ಶೈತಾನನು ಅವರನ್ನು (ಅವರ ಪೂರ್ವಜರನ್ನು) ಜ್ವಲಿಸುವ ನರಕಕ್ಕೆ ಕರೆಯುತ್ತಿದ್ದರೂ (ಅವರು ಅವರನ್ನೇ ಅನುಸರಿಸುವರೇ?) info
التفاسير:

external-link copy
22 : 31

وَمَنْ یُّسْلِمْ وَجْهَهٗۤ اِلَی اللّٰهِ وَهُوَ مُحْسِنٌ فَقَدِ اسْتَمْسَكَ بِالْعُرْوَةِ الْوُثْقٰی ؕ— وَاِلَی اللّٰهِ عَاقِبَةُ الْاُمُوْرِ ۟

ಯಾರು ಒಳಿತು ಮಾಡುವವನಾಗಿದ್ದು ತನ್ನ ಮುಖವನ್ನು ಅಲ್ಲಾಹನಿಗೆ ಶರಣಾಗಿಸುತ್ತಾನೋ ಅವನು ಬಲಿಷ್ಠ ಹಿಡಿಕೆಯನ್ನು ಹಿಡಿದಿದ್ದಾನೆ. ಎಲ್ಲಾ ವಿಷಯಗಳ ಅಂತಿಮ ಫಲಿತಾಂಶವು ಅಲ್ಲಾಹನ ಬಳಿಗೇ ಆಗಿದೆ. info
التفاسير:

external-link copy
23 : 31

وَمَنْ كَفَرَ فَلَا یَحْزُنْكَ كُفْرُهٗ ؕ— اِلَیْنَا مَرْجِعُهُمْ فَنُنَبِّئُهُمْ بِمَا عَمِلُوْا ؕ— اِنَّ اللّٰهَ عَلِیْمٌۢ بِذَاتِ الصُّدُوْرِ ۟

ಯಾರಾದರೂ ಸತ್ಯನಿಷೇಧಿಯಾದರೆ ಅವನ ಸತ್ಯನಿಷೇಧವು ನಿಮ್ಮನ್ನು ಬೇಸರಪಡಿಸದಿರಲಿ. ಅವರು ಮರಳಿ ಬರುವುದು ನಮ್ಮ ಬಳಿಗೇ ಆಗಿದೆ. ಆಗ ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ ನಾವು ಅವರಿಗೆ ತಿಳಿಸಿಕೊಡುವೆವು. ನಿಶ್ಚಯವಾಗಿಯೂ ಅಲ್ಲಾಹು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ. info
التفاسير:

external-link copy
24 : 31

نُمَتِّعُهُمْ قَلِیْلًا ثُمَّ نَضْطَرُّهُمْ اِلٰی عَذَابٍ غَلِیْظٍ ۟

ನಾವು ಅವರಿಗೆ ತಾತ್ಕಾಲಿಕ ಆನಂದವನ್ನು ನೀಡುತ್ತೇವೆ. ನಂತರ ಅವರನ್ನು ಕಠೋರ ಶಿಕ್ಷೆಗೆ ಬಲವಂತದಿಂದ ತಳ್ಳುತ್ತೇವೆ. info
التفاسير:

external-link copy
25 : 31

وَلَىِٕنْ سَاَلْتَهُمْ مَّنْ خَلَقَ السَّمٰوٰتِ وَالْاَرْضَ لَیَقُوْلُنَّ اللّٰهُ ؕ— قُلِ الْحَمْدُ لِلّٰهِ ؕ— بَلْ اَكْثَرُهُمْ لَا یَعْلَمُوْنَ ۟

“ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತವಾಗಿಯೂ “ಅಲ್ಲಾಹು” ಎಂದೇ ಹೇಳುತ್ತಾರೆ. ಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ.” ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير:

external-link copy
26 : 31

لِلّٰهِ مَا فِی السَّمٰوٰتِ وَالْاَرْضِ ؕ— اِنَّ اللّٰهَ هُوَ الْغَنِیُّ الْحَمِیْدُ ۟

ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅಲ್ಲಾಹನಿಗೆ ಸೇರಿದ್ದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ. info
التفاسير:

external-link copy
27 : 31

وَلَوْ اَنَّمَا فِی الْاَرْضِ مِنْ شَجَرَةٍ اَقْلَامٌ وَّالْبَحْرُ یَمُدُّهٗ مِنْ بَعْدِهٖ سَبْعَةُ اَبْحُرٍ مَّا نَفِدَتْ كَلِمٰتُ اللّٰهِ ؕ— اِنَّ اللّٰهَ عَزِیْزٌ حَكِیْمٌ ۟

ಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾಗಿ ಮತ್ತು ಸಮುದ್ರವು ಶಾಯಿಯಾಗಿ ಮಾರ್ಪಟ್ಟು, ನಂತರ ಏಳು ಸಮುದ್ರಗಳು ಬೇರೆಯಿದ್ದರೂ ಅಲ್ಲಾಹನ ವಚನಗಳನ್ನು ಬರೆದು ಮುಗಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير:

external-link copy
28 : 31

مَا خَلْقُكُمْ وَلَا بَعْثُكُمْ اِلَّا كَنَفْسٍ وَّاحِدَةٍ ؕ— اِنَّ اللّٰهَ سَمِیْعٌ بَصِیْرٌ ۟

ನಿಮ್ಮನ್ನು ಸೃಷ್ಟಿಸುವುದು ಮತ್ತು ನಿಮಗೆ ಪುನಃ ಜೀವ ನೀಡಿ ಎಬ್ಬಿಸುವುದು ಕೇವಲ ಒಬ್ಬ ವ್ಯಕ್ತಿಗೆ ಸಮಾನವಾಗಿದೆ.[1] ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ. info

[1] ಅಂದರೆ ಸಹಸ್ರಕೋಟಿ ಮಾನವರನ್ನು ಸೃಷ್ಟಿಸಿ, ಅವರನ್ನು ಮೃತಪಡಿಸಿ, ನಂತರ ಪುನರುತ್ಥಾನ ದಿನದಂದು ಅವರಿಗೆ ಪುನಃ ಜೀವ ನೀಡಿ ಎಬ್ಬಿಸುವುದು ಅಲ್ಲಾಹನಿಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿ, ಅವನನ್ನು ಮೃತಪಡಿಸಿ, ಅವನಿಗೆ ಪುನಃ ಜೀವ ನೀಡುವುದಕ್ಕೆ ಸಮಾನವಾಗಿದೆ.

التفاسير: