Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (253) ಅಧ್ಯಾಯ: ಅಲ್- ಬಕರ
تِلْكَ الرُّسُلُ فَضَّلْنَا بَعْضَهُمْ عَلٰی بَعْضٍ ۘ— مِنْهُمْ مَّنْ كَلَّمَ اللّٰهُ وَرَفَعَ بَعْضَهُمْ دَرَجٰتٍ ؕ— وَاٰتَیْنَا عِیْسَی ابْنَ مَرْیَمَ الْبَیِّنٰتِ وَاَیَّدْنٰهُ بِرُوْحِ الْقُدُسِ ؕ— وَلَوْ شَآءَ اللّٰهُ مَا اقْتَتَلَ الَّذِیْنَ مِنْ بَعْدِهِمْ مِّنْ بَعْدِ مَا جَآءَتْهُمُ الْبَیِّنٰتُ وَلٰكِنِ اخْتَلَفُوْا فَمِنْهُمْ مَّنْ اٰمَنَ وَمِنْهُمْ مَّنْ كَفَرَ ؕ— وَلَوْ شَآءَ اللّٰهُ مَا اقْتَتَلُوْا ۫— وَلٰكِنَّ اللّٰهَ یَفْعَلُ مَا یُرِیْدُ ۟۠
ನಾವು ಆ ಸಂದೇಶವಾಹಕರಲ್ಲಿ ಕೆಲವರಿಗೆ ಇನ್ನು ಕೆಲವರಿಗಿಂತ ಶ್ರೇಷ್ಠತೆಯನ್ನು ದಯಪಾಲಿಸಿದೆವು. ಅವರ ಪೈಕಿ ಅಲ್ಲಾಹನು ಸಂಭಾಷಣೆ ನಡೆಸಿದವರು ಇದ್ದಾರೆ ಮತ್ತು ಅವನು ಅವರಲ್ಲಿ ಕೆಲವರಿಗೆ ಪದವಿಗಳನ್ನು ನೀಡಿ ಉನ್ನತಗೊಳಿಸಿದನು ಮತ್ತು ಮರ್ಯಮರ ಪುತ್ರ ಈಸಾರಿಗೆ ನಾವು ಸುಸ್ಪಷ್ಟ ಪುರಾವೆಗಳನ್ನು ದಯಪಾಲಿಸಿದೆವು ಹಾಗೂ ಅವರನ್ನು ಪವಿತ್ರಾತ್ಮನ ಮೂಲಕ ಬಲಪಡಿಸಿದೆವು ಮತ್ತು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ತಮ್ಮಲ್ಲಿಗೆ ಸುಸ್ಪಷ್ಟ ಪುರಾವೆಗಳು ಬಂದ ಬಳಿಕವೂ ಅವರ ನಂತರದವರು ಪರಸ್ಪರ ಕಾದಾಡುತ್ತಿರಲಿಲ್ಲ. ಆದರೆ ಅವರು ಭಿನ್ನತೆ ತೋರಿದರು. ಹೀಗೆ ಅವರಲ್ಲಿ ಕೆಲವರು ಸತ್ಯ ವಿಶ್ವಾಸವಿರಿಸಿದರು ಇನ್ನು ಕೆಲವರು ಸತ್ಯನಿಷೇಧ ಕೈಗೊಂಡರು ಮತ್ತು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಅವರು ಪರಸ್ಪರ ಕಾದಾಡುತ್ತಿರಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (253) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ