Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್ -ಕ್ವಸಸ್   ಶ್ಲೋಕ:

ಅಲ್ -ಕ್ವಸಸ್

طٰسٓمّٓ ۟
ತ್ವಾಸೀನ್ ಮೀಮ್
ಅರಬ್ಬಿ ವ್ಯಾಖ್ಯಾನಗಳು:
تِلْكَ اٰیٰتُ الْكِتٰبِ الْمُبِیْنِ ۟
ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.
ಅರಬ್ಬಿ ವ್ಯಾಖ್ಯಾನಗಳು:
نَتْلُوْا عَلَیْكَ مِنْ نَّبَاِ مُوْسٰی وَفِرْعَوْنَ بِالْحَقِّ لِقَوْمٍ یُّؤْمِنُوْنَ ۟
ನಾವು ನಿಮಗೆ ಮೂಸಾ ಮತ್ತು ಫಿರ್‌ಔನನ ಕೆಲವು ವೃತ್ತಾಂತವನ್ನು ವಿಶ್ವಾಸವಿರಿಸುವ ಜನರಿಗೆ ಯಥಾರ್ಥವಾಗಿ ಓದಿ ಕೇಳಿಸುತ್ತಿದ್ದೇವೆ.
ಅರಬ್ಬಿ ವ್ಯಾಖ್ಯಾನಗಳು:
اِنَّ فِرْعَوْنَ عَلَا فِی الْاَرْضِ وَجَعَلَ اَهْلَهَا شِیَعًا یَّسْتَضْعِفُ طَآىِٕفَةً مِّنْهُمْ یُذَبِّحُ اَبْنَآءَهُمْ وَیَسْتَحْیٖ نِسَآءَهُمْ ؕ— اِنَّهٗ كَانَ مِنَ الْمُفْسِدِیْنَ ۟
ನಿಜವಾಗಿಯು ಫಿರ್‌ಔನನು ಭೂಮಿಯಲ್ಲಿ (ಈಜಿಪ್ಟ್) ದರ್ಪ ತೋರಿದನು ಮತ್ತು ಅಲ್ಲಿನ ನಿವಾಸಿಗಳನ್ನು ಗುಂಪುಗಳಾಗಿ ವಿಂಗಡಿಸಿದ್ದನು ಅವರ ಪೈಕಿ ಒಂದು ಕೂಟವನ್ನು (ಬನೀ ಇಸ್ರಾಯೀಲರನ್ನು) ದಮನಿಸಿಟ್ಟಿದ್ದನು ಮತ್ತು ಅವರ ಗಂಡು ಸಂತತಿಗಳನ್ನು ಕೊಂದು ಅವರ ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದನು. ನಿಸ್ಸಂಶಯವಾಗಿಯು ಅವನು ಕ್ಷೆÆÃಭೆ ಹರಡುವವರಲ್ಲಾಗಿದ್ದನು.
ಅರಬ್ಬಿ ವ್ಯಾಖ್ಯಾನಗಳು:
وَنُرِیْدُ اَنْ نَّمُنَّ عَلَی الَّذِیْنَ اسْتُضْعِفُوْا فِی الْاَرْضِ وَنَجْعَلَهُمْ اَىِٕمَّةً وَّنَجْعَلَهُمُ الْوٰرِثِیْنَ ۟ۙ
ಭೂಮಿಯಲ್ಲಿ ತುಳಿಯಲ್ಪಟ್ಟವರ ಮೇಲೆ ಕೃಪೆ ತೋರಲೆಂದು, ಅವರನ್ನು ನಾಯಕರು ಮತ್ತು ಉತ್ತರಾಧಿಕಾರಿಗಳನ್ನಾಗಿ ಮಾಡಲೆಂದು ನಾವು ಇಚ್ಛಿಸಿದೆವು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್ -ಕ್ವಸಸ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ