Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು * - ಅನುವಾದಗಳ ವಿಷಯಸೂಚಿ

PDF XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಇಬ್ರಾಹೀಮ್   ಶ್ಲೋಕ:

ಇಬ್ರಾಹೀಮ್

الٓرٰ ۫— كِتٰبٌ اَنْزَلْنٰهُ اِلَیْكَ لِتُخْرِجَ النَّاسَ مِنَ الظُّلُمٰتِ اِلَی النُّوْرِ ۙ۬— بِاِذْنِ رَبِّهِمْ اِلٰی صِرَاطِ الْعَزِیْزِ الْحَمِیْدِ ۟ۙ
ಅಲಿಫ್ ಲಾಮ್ ರಾ. ಇದು ಗ್ರಂಥ. ನೀವು ಮನುಷ್ಯರನ್ನು ಅವರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಂತೆ ಅಂಧಕಾರಗಳಿಂದ ಬೆಳಕಿಗೆ—ಪ್ರಬಲನು ಮತ್ತು ಸ್ತುತ್ಯರ್ಹನಾದವನ ಮಾರ್ಗಕ್ಕೆ—ತರಲು ನಾವು ಇದನ್ನು ನಿಮಗೆ ಅವತೀರ್ಣಗೊಳಿಸಿದ್ದೇವೆ.
ಅರಬ್ಬಿ ವ್ಯಾಖ್ಯಾನಗಳು:
اللّٰهِ الَّذِیْ لَهٗ مَا فِی السَّمٰوٰتِ وَمَا فِی الْاَرْضِ ؕ— وَوَیْلٌ لِّلْكٰفِرِیْنَ مِنْ عَذَابٍ شَدِیْدِ ۟ۙ
ಅಂದರೆ, ಭೂಮ್ಯಾಕಾಶಗಳಲ್ಲಿರುವ ವಸ್ತುಗಳೆಲ್ಲವೂ ಯಾರಿಗೆ ಸೇರಿದೆಯೋ ಆ ಅಲ್ಲಾಹನ ಮಾರ್ಗಕ್ಕೆ. ಸತ್ಯನಿಷೇಧಿಗಳಿಗೆ ಕಠೋರ ಶಿಕ್ಷೆಯ ದುರ್ಗತಿ ಕಾದಿದೆ.
ಅರಬ್ಬಿ ವ್ಯಾಖ್ಯಾನಗಳು:
١لَّذِیْنَ یَسْتَحِبُّوْنَ الْحَیٰوةَ الدُّنْیَا عَلَی الْاٰخِرَةِ وَیَصُدُّوْنَ عَنْ سَبِیْلِ اللّٰهِ وَیَبْغُوْنَهَا عِوَجًا ؕ— اُولٰٓىِٕكَ فِیْ ضَلٰلٍۢ بَعِیْدٍ ۟
ಅವರು ಯಾರೆಂದರೆ, ಪರಲೋಕಕ್ಕಿಂತಲೂ ಇಹಲೋಕಕ್ಕೆ ಆದ್ಯತೆ ನೀಡುವವರು, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಗಟ್ಟುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಅತಿವಿದೂರದ ದುರ್ಮಾರ್ಗದಲ್ಲಿದ್ದಾರೆ.
ಅರಬ್ಬಿ ವ್ಯಾಖ್ಯಾನಗಳು:
وَمَاۤ اَرْسَلْنَا مِنْ رَّسُوْلٍ اِلَّا بِلِسَانِ قَوْمِهٖ لِیُبَیِّنَ لَهُمْ ؕ— فَیُضِلُّ اللّٰهُ مَنْ یَّشَآءُ وَیَهْدِیْ مَنْ یَّشَآءُ ؕ— وَهُوَ الْعَزِیْزُ الْحَكِیْمُ ۟
ನಾವು ಎಲ್ಲಾ ಸಂದೇಶವಾಹಕರನ್ನೂ ಅವರ ಜನರ ಭಾಷೆಯಲ್ಲಿ (ಮಾತನಾಡುವಂತೆ) ಕಳುಹಿಸಿದ್ದೇವೆ. ಅವರು ಜನರಿಗೆ ಸಂದೇಶವನ್ನು ಸ್ಪಷ್ಟವಾಗಿ ವಿವರಿಸಿಕೊಡುವುದಕ್ಕಾಗಿ. ಅಲ್ಲಾಹು ಅವನು ಇಚ್ಛಿಸುವವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
وَلَقَدْ اَرْسَلْنَا مُوْسٰی بِاٰیٰتِنَاۤ اَنْ اَخْرِجْ قَوْمَكَ مِنَ الظُّلُمٰتِ اِلَی النُّوْرِ ۙ۬— وَذَكِّرْهُمْ بِاَیّٰىمِ اللّٰهِ ؕ— اِنَّ فِیْ ذٰلِكَ لَاٰیٰتٍ لِّكُلِّ صَبَّارٍ شَكُوْرٍ ۟
“ನಿಮ್ಮ ಜನರನ್ನು ಅಂಧಕಾರಗಳಿಂದ ಬೆಳಕಿಗೆ ತನ್ನಿರಿ ಮತ್ತು ಅವರಿಗೆ ಅಲ್ಲಾಹನ ಉಪಕಾರಗಳನ್ನು ನೆನಪಿಸಿಕೊಡಿ” (ಎಂದು ಆದೇಶಿಸುತ್ತಾ) ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊಂದಿಗೆ ಕಳುಹಿಸಿದೆವು. ನಿಶ್ಚಯವಾಗಿಯೂ, ಸೈರಣೆಯಿರುವ ಮತ್ತು ಕೃತಜ್ಞರಾದ ಪ್ರತಿಯೊಬ್ಬರಿಗೂ ಅದರಲ್ಲಿ ದೃಷ್ಟಾಂತಗಳಿವೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಇಬ್ರಾಹೀಮ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಹಂಝ ಪುತ್ತೂರು - ಅನುವಾದಗಳ ವಿಷಯಸೂಚಿ

ಅನುವಾದ - ಮುಹಮ್ಮದ್ ಹಂಝ ಪುತ್ತೂರು ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ