ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (196) ಅಧ್ಯಾಯ: ಸೂರ ಅಲ್- ಬಕರ
وَاَتِمُّوا الْحَجَّ وَالْعُمْرَةَ لِلّٰهِ ؕ— فَاِنْ اُحْصِرْتُمْ فَمَا اسْتَیْسَرَ مِنَ الْهَدْیِ ۚ— وَلَا تَحْلِقُوْا رُءُوْسَكُمْ حَتّٰی یَبْلُغَ الْهَدْیُ مَحِلَّهٗ ؕ— فَمَنْ كَانَ مِنْكُمْ مَّرِیْضًا اَوْ بِهٖۤ اَذًی مِّنْ رَّاْسِهٖ فَفِدْیَةٌ مِّنْ صِیَامٍ اَوْ صَدَقَةٍ اَوْ نُسُكٍ ۚ— فَاِذَاۤ اَمِنْتُمْ ۥ— فَمَنْ تَمَتَّعَ بِالْعُمْرَةِ اِلَی الْحَجِّ فَمَا اسْتَیْسَرَ مِنَ الْهَدْیِ ۚ— فَمَنْ لَّمْ یَجِدْ فَصِیَامُ ثَلٰثَةِ اَیَّامٍ فِی الْحَجِّ وَسَبْعَةٍ اِذَا رَجَعْتُمْ ؕ— تِلْكَ عَشَرَةٌ كَامِلَةٌ ؕ— ذٰلِكَ لِمَنْ لَّمْ یَكُنْ اَهْلُهٗ حَاضِرِی الْمَسْجِدِ الْحَرَامِ ؕ— وَاتَّقُوا اللّٰهَ وَاعْلَمُوْۤا اَنَّ اللّٰهَ شَدِیْدُ الْعِقَابِ ۟۠
ಅಲ್ಲಾಹನಿಗಾಗಿ ಹಜ್ಜ್ ಮತ್ತು ಉಮ್ರಗಳನ್ನು ಪೂರ್ತಿಗೊಳಿಸಿರಿ. ನಿಮ್ಮನ್ನು (ದಾರಿ ಮಧ್ಯೆ) ತಡೆಯಲಾದರೆ ನಿಮಗೆ ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಿರಿ.[1] ಬಲಿಮೃಗವು ಅದರ ಸ್ಥಳವನ್ನು ತಲುಪುವ ತನಕ ಕೇಶಮುಂಡನ ಮಾಡಬೇಡಿ. ನಿಮ್ಮಲ್ಲಿ ಯಾರಾದರೂ ಅನಾರೋಗ್ಯದಲ್ಲಿದ್ದು ಅಥವಾ ತಲೆಯಲ್ಲಿ ಏನಾದರೂ ತೊಂದರೆಯಿದ್ದು, (ಕೇಶ ಮುಂಡನ ಮಾಡಿದ್ದರೆ) ಅದಕ್ಕೆ ಪರಿಹಾರವಾಗಿ ಉಪವಾಸ ಅಥವಾ ದಾನಧರ್ಮ ಅಥವಾ ಬಲಿಕರ್ಮ ನಿರ್ವಹಿಸಲಿ. ಆದರೆ ನೀವು ನಿರ್ಭಯ ಸ್ಥಿತಿಯಲ್ಲಿದ್ದು, ನಿಮ್ಮಲ್ಲಿ ಯಾರಾದರೂ ಉಮ್ರಾ ನಿರ್ವಹಿಸಿ ಹಜ್ಜ್ ತನಕ ವಿಶ್ರಾಂತಿ ಪಡೆದರೆ, ಅವನು ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಲಿ. ಯಾರಿಗೆ ಬಲಿಮೃಗ ಸಿಗುವುದಿಲ್ಲವೋ ಅವನು ಹಜ್ಜ್‌ನ ಸಮಯದಲ್ಲಿ ಮೂರು ದಿನ ಮತ್ತು (ಊರಿಗೆ) ಮರಳಿದ ಬಳಿಕ ಏಳು ದಿನ; ಒಟ್ಟು ಹತ್ತು ದಿನ ಉಪವಾಸ ಆಚರಿಸಲಿ. ಈ ನಿಯಮವಿರುವುದು ಮಸ್ಜಿದುಲ್ ಹರಾಮ್‍ನ ನಿವಾಸಿಗಳಲ್ಲದವರಿಗೆ ಮಾತ್ರ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಅತಿ ಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.
[1] ದಾರಿ ಮಧ್ಯೆ ಶತ್ರುಗಳು ನಿಮ್ಮನ್ನು ತಡೆದರೆ, ಅಥವಾ ತೀವ್ರ ಅನಾರೋಗ್ಯದಿಂದಾಗಿ ಪ್ರಯಾಣ ಮುಂದುವರಿಸಲು ನಿಮಗೆ ಸಾಧ್ಯವಾಗದೆ ಹೋದರೆ, ಬಲಿಮೃಗವನ್ನು ಬಲಿ ನೀಡಿ, ಕೇಶ ಮುಂಡನ ಮಾಡಿ ಇಹ್ರಾಮ್‌ನಿಂದ ಮುಕ್ತರಾಗಬಹುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (196) ಅಧ್ಯಾಯ: ಸೂರ ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ