Check out the new design

വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ * - വിവർത്തനങ്ങളുടെ സൂചിക

PDF XML CSV Excel API
Please review the Terms and Policies

പരിഭാഷ അദ്ധ്യായം: മാഇദ   ആയത്ത്:
سَمّٰعُوْنَ لِلْكَذِبِ اَكّٰلُوْنَ لِلسُّحْتِ ؕ— فَاِنْ جَآءُوْكَ فَاحْكُمْ بَیْنَهُمْ اَوْ اَعْرِضْ عَنْهُمْ ۚ— وَاِنْ تُعْرِضْ عَنْهُمْ فَلَنْ یَّضُرُّوْكَ شَیْـًٔا ؕ— وَاِنْ حَكَمْتَ فَاحْكُمْ بَیْنَهُمْ بِالْقِسْطِ ؕ— اِنَّ اللّٰهَ یُحِبُّ الْمُقْسِطِیْنَ ۟
ಅವರು ಸುಳ್ಳನ್ನು ಕಿವಿಗೊಟ್ಟು ಕೇಳುವವರು ಮತ್ತು ನಿಷಿದ್ಧ ಧನವನ್ನು ತಿನ್ನುವವರಾಗಿದ್ದಾರೆ. ಅವರು ನಿಮ್ಮ ಬಳಿಗೆ (ತೀರ್ಪಿಗಾಗಿ) ಬಂದರೆ ನೀವು ಅವರ ನಡುವೆ ತೀರ್ಪು ನೀಡಿರಿ ಅಥವಾ ಅವರನ್ನು ನಿರ್ಲಕ್ಷಿಸಿರಿ. ನೀವು ಅವರನ್ನು ನಿರ್ಲಕ್ಷಿಸಿದರೆ ಅವರು ನಿಮಗೆ ಯಾವುದೇ ತೊಂದರೆ ಮಾಡಲಾರರು. ಇನ್ನು ನೀವು ತೀರ್ಪು ನೀಡುವುದಾದರೆ ಅವರ ನಡುವೆ ನ್ಯಾಯಯುತವಾಗಿ ತೀರ್ಪು ನೀಡಿರಿ. ನಿಶ್ಚಯವಾಗಿಯೂ ನ್ಯಾಯಯುತವಾಗಿ ವರ್ತಿಸುವವರನ್ನು ಅಲ್ಲಾಹು ಇಷ್ಟಪಡುತ್ತಾನೆ.
അറബി ഖുർആൻ വിവരണങ്ങൾ:
وَكَیْفَ یُحَكِّمُوْنَكَ وَعِنْدَهُمُ التَّوْرٰىةُ فِیْهَا حُكْمُ اللّٰهِ ثُمَّ یَتَوَلَّوْنَ مِنْ بَعْدِ ذٰلِكَ ؕ— وَمَاۤ اُولٰٓىِٕكَ بِالْمُؤْمِنِیْنَ ۟۠
ಆದರೆ ಅವರ ಬಳಿ ತೌರಾತ್ ಇದ್ದು ಅದರಲ್ಲಿ ಅಲ್ಲಾಹನ ತೀರ್ಪು ಇರುವಾಗ ಅವರು (ಅದನ್ನು ಬಿಟ್ಟು) ತೀರ್ಪಿಗಾಗಿ ನಿಮ್ಮ ಬಳಿಗೆ ಬರುವುದು ಹೇಗೆ? ನಂತರ ಅದರ ಬಳಿಕವೂ ಅವರು ವಿಮುಖರಾಗುತ್ತಾರೆ. ಅವರು ಸತ್ಯವಿಶ್ವಾಸಿಗಳೇ ಅಲ್ಲ.
അറബി ഖുർആൻ വിവരണങ്ങൾ:
اِنَّاۤ اَنْزَلْنَا التَّوْرٰىةَ فِیْهَا هُدًی وَّنُوْرٌ ۚ— یَحْكُمُ بِهَا النَّبِیُّوْنَ الَّذِیْنَ اَسْلَمُوْا لِلَّذِیْنَ هَادُوْا وَالرَّبّٰنِیُّوْنَ وَالْاَحْبَارُ بِمَا اسْتُحْفِظُوْا مِنْ كِتٰبِ اللّٰهِ وَكَانُوْا عَلَیْهِ شُهَدَآءَ ۚ— فَلَا تَخْشَوُا النَّاسَ وَاخْشَوْنِ وَلَا تَشْتَرُوْا بِاٰیٰتِیْ ثَمَنًا قَلِیْلًا ؕ— وَمَنْ لَّمْ یَحْكُمْ بِمَاۤ اَنْزَلَ اللّٰهُ فَاُولٰٓىِٕكَ هُمُ الْكٰفِرُوْنَ ۟
ನಿಶ್ಚಯವಾಗಿಯೂ ನಾವು ತೌರಾತನ್ನು ಅವತೀರ್ಣಗೊಳಿಸಿದ್ದೇವೆ. ಅದರಲ್ಲಿ ಸನ್ಮಾರ್ಗ ಮತ್ತು ಬೆಳಕಿದೆ. (ಅಲ್ಲಾಹನಿಗೆ) ಶರಣಾದ ಪ್ರವಾದಿಗಳು, ದೇವನಿಷ್ಠರು ಮತ್ತು ವಿದ್ವಾಂಸರು ಅದರಲ್ಲಿರುವಂತೆ ಯಹೂದಿಗಳ ನಡುವೆ ತೀರ್ಪು ನೀಡುತ್ತಿದ್ದರು. ಏಕೆಂದರೆ ಅಲ್ಲಾಹನ ಗ್ರಂಥದ ಸಂರಕ್ಷಣೆಯನ್ನು ಅವರಿಗೆ ವಹಿಸಿಕೊಡಲಾಗಿತ್ತು. ಅವರು ಅದಕ್ಕೆ ಸಾಕ್ಷಿಗಳಾಗಿದ್ದರು. ಆದ್ದರಿಂದ ನೀವು ಜನರನ್ನು ಭಯಪಡಬೇಡಿ. ನನ್ನನ್ನು ಭಯಪಡಿರಿ. ನನ್ನ ವಚನಗಳನ್ನು ಕೀಳು ದರಕ್ಕೆ ಮಾರಾಟ ಮಾಡಬೇಡಿ. ಅಲ್ಲಾಹು ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ಯಾರು ತೀರ್ಪು ನೀಡುವುದಿಲ್ಲವೋ ಅವರೇ ಸತ್ಯನಿಷೇಧಿಗಳು.
അറബി ഖുർആൻ വിവരണങ്ങൾ:
وَكَتَبْنَا عَلَیْهِمْ فِیْهَاۤ اَنَّ النَّفْسَ بِالنَّفْسِ ۙ— وَالْعَیْنَ بِالْعَیْنِ وَالْاَنْفَ بِالْاَنْفِ وَالْاُذُنَ بِالْاُذُنِ وَالسِّنَّ بِالسِّنِّ ۙ— وَالْجُرُوْحَ قِصَاصٌ ؕ— فَمَنْ تَصَدَّقَ بِهٖ فَهُوَ كَفَّارَةٌ لَّهٗ ؕ— وَمَنْ لَّمْ یَحْكُمْ بِمَاۤ اَنْزَلَ اللّٰهُ فَاُولٰٓىِٕكَ هُمُ الظّٰلِمُوْنَ ۟
ನಾವು ಅವರಿಗೆ ಅದರಲ್ಲಿ (ತೌರಾತ್‍ನಲ್ಲಿ) ಜೀವಕ್ಕೆ ಜೀವ, ಕಣ್ಣಿಗೆ ಕಣ್ಣು, ಮೂಗಿಗೆ ಮೂಗು, ಕಿವಿಗೆ ಕಿವಿ, ಹಲ್ಲಿಗೆ ಹಲ್ಲು ಮತ್ತು ಗಾಯಗಳಿಗೆ ಪ್ರತೀಕಾರ ಪಡೆಯಬೇಕೆಂದು ಆದೇಶಿಸಿದ್ದೇವೆ. ಯಾರಾದರೂ (ಪ್ರತೀಕಾರ ಪಡೆಯದೆ) ಕ್ಷಮಿಸಿದರೆ, ಅದು ಅವನಿಗೆ ಪರಿಹಾರವಾಗಿದೆ. ಅಲ್ಲಾಹು ಅವತೀರ್ಣಗೊಳಿಸಿದ್ದಕ್ಕೆ ಅನುಗುಣವಾಗಿ ಯಾರು ತೀರ್ಪು ನೀಡುವುದಿಲ್ಲವೋ ಅವರೇ ಅಕ್ರಮಿಗಳು.
അറബി ഖുർആൻ വിവരണങ്ങൾ:
 
പരിഭാഷ അദ്ധ്യായം: മാഇദ
സൂറത്തുകളുടെ സൂചിക പേജ് നമ്പർ
 
വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ - വിവർത്തനങ്ങളുടെ സൂചിക

മുഹമ്മദ് ഹംസ ബതൂർ വിവർത്തനം ചെയ്തിരിക്കുന്നു. റുവാദൂത്തർജമ മർകസിൻ്റെ മേൽ നോട്ടത്തിലാണ് ഇത് വികസിപ്പിച്ചെടുത്തത്.

അടക്കുക