Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ


ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߛߞߎ߬ߦߊ߬ߟߊ ߟߎ߬   ߟߝߊߙߌ ߘߏ߫:
قَالَ وَمَا عِلْمِیْ بِمَا كَانُوْا یَعْمَلُوْنَ ۟ۚ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡರಿರಿ ಮತ್ತು ನನ್ನನ್ನು ಅನುಸರಿಸಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنْ حِسَابُهُمْ اِلَّا عَلٰی رَبِّیْ لَوْ تَشْعُرُوْنَ ۟ۚ
ಅವರ ಲೆಕ್ಕವಿಚಾರಣೆಯಂತು ನನ್ನ ಪ್ರಭುವಿನ ಹೊಣೆಯಲ್ಲಿದೆ. ನಿಮಗೆ ತಿಳಿದಿರುತ್ತಿದ್ದರೆ!
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَاۤ اَنَا بِطَارِدِ الْمُؤْمِنِیْنَ ۟ۚ
ಸತ್ಯವಿಶ್ವಾಸಿಗಳನ್ನು ನಾನು ಅಟ್ಟಿ ಓಡಿಸುವವನಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنْ اَنَا اِلَّا نَذِیْرٌ مُّبِیْنٌ ۟ؕ
ನಾನಂತು ಸುಸ್ಪಷ್ಟವಾಗಿ ಒಬ್ಬ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا لَىِٕنْ لَّمْ تَنْتَهِ یٰنُوْحُ لَتَكُوْنَنَّ مِنَ الْمَرْجُوْمِیْنَ ۟ؕ
ಅವರು ಹೇಳಿದರು: ಓ ನೂಹ್! ನೀನಿದನ್ನು ತೊರೆಯದಿದ್ದರೆ ಖಂಡಿತವಾಗಿಯು ನಿನ್ನನ್ನು ಕಲ್ಲೆಸೆದು ಕೊಲ್ಲಲಾಗುವುದು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ رَبِّ اِنَّ قَوْمِیْ كَذَّبُوْنِ ۟ۚۖ
ನೂಹ್‌ರವರು ಪ್ರಾರ್ಥಿಸಿದರು: ನನ್ನ ಪ್ರಭುವೇ, ನನ್ನ ಜನರು ನನ್ನನ್ನು ಸುಳ್ಳಾಗಿಸಿಬಿಟ್ಟರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَافْتَحْ بَیْنِیْ وَبَیْنَهُمْ فَتْحًا وَّنَجِّنِیْ وَمَنْ مَّعِیَ مِنَ الْمُؤْمِنِیْنَ ۟
ಆದ್ದದರಿಂದ ನೀನು ನನ್ನ ಮತ್ತು ಅವರ ನಡುವೆ ನಿರ್ಣಾಯಕ ತೀರ್ಮಾನವನ್ನು ಮಾಡಿಬಿಡು ಮತ್ತು ನನ್ನನ್ನೂ, ನನ್ನ ಸತ್ಯವಿಶ್ವಾಸಿ ಸಂಗಡಿಗರನ್ನೂ ರಕ್ಷಿಸು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاَنْجَیْنٰهُ وَمَنْ مَّعَهٗ فِی الْفُلْكِ الْمَشْحُوْنِ ۟ۚ
ಕೊನೆಗೆ ನಾವು ಅವರನ್ನೂ,ಮತ್ತು ತುಂಬಿದ ಹಡಗಿನಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿದೆವು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
ثُمَّ اَغْرَقْنَا بَعْدُ الْبٰقِیْنَ ۟ؕ
ತರುವಾಯ ಉಳಿದವರನ್ನು ನಾವು ಮುಳುಗಿಸಿಬಿಟ್ಟೆವು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنَّ فِیْ ذٰلِكَ لَاٰیَةً ؕ— وَمَا كَانَ اَكْثَرُهُمْ مُّؤْمِنِیْنَ ۟
ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಾಗಿರಲಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاِنَّ رَبَّكَ لَهُوَ الْعَزِیْزُ الرَّحِیْمُ ۟۠
ನಿಸ್ಸಂದೇಹವಾಗಿಯು ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
كَذَّبَتْ عَادُ ١لْمُرْسَلِیْنَ ۟ۚۖ
ಆದ್ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِذْ قَالَ لَهُمْ اَخُوْهُمْ هُوْدٌ اَلَا تَتَّقُوْنَ ۟ۚ
ಅವರ ಸಹೋದರ ಹೂದ್‌ರವರು “ನೀವು (ಅಲ್ಲಾಹನನ್ನು) ಭಯ ಪಡುವುದಿಲ್ಲವೇ?” ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنِّیْ لَكُمْ رَسُوْلٌ اَمِیْنٌ ۟ۙ
ನಾನು ನಿಮ್ಮ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاتَّقُوا اللّٰهَ وَاَطِیْعُوْنِ ۟ۚ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَاۤ اَسْـَٔلُكُمْ عَلَیْهِ مِنْ اَجْرٍ ۚ— اِنْ اَجْرِیَ اِلَّا عَلٰی رَبِّ الْعٰلَمِیْنَ ۟ؕ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَتَبْنُوْنَ بِكُلِّ رِیْعٍ اٰیَةً تَعْبَثُوْنَ ۟ۙ
ನೀವು ಪ್ರತಿಯೊಂದು ಎತ್ತರ ಪ್ರದೇಶದಲ್ಲಿ ವ್ಯರ್ಥವಾಗಿ ಸ್ಮಾರಕವನ್ನು ನಿರ್ಮಿಸುತ್ತಿದ್ದೀರಾ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَتَتَّخِذُوْنَ مَصَانِعَ لَعَلَّكُمْ تَخْلُدُوْنَ ۟ۚ
ನೀವು ಇಲ್ಲೇ ಶಾಶ್ವತರಾಗಿರುವಿರೇನೋ ಎಂಬAತೆ ಬೃಹತ್ ಸೌಧಗಳನ್ನು ನಿರ್ಮಿಸುತ್ತಿರುವಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاِذَا بَطَشْتُمْ بَطَشْتُمْ جَبَّارِیْنَ ۟ۚ
ನೀವು ಯಾರನ್ನಾದರೂ ಹಿಡಿಯುವುದಾದರೆ ಅತ್ಯಂತ ದೌರ್ಜನ್ಯದೊಂದಿಗೆ ಹಿಡಿಯುತ್ತೀರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاتَّقُوا اللّٰهَ وَاَطِیْعُوْنِ ۟ۚ
ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاتَّقُوا الَّذِیْۤ اَمَدَّكُمْ بِمَا تَعْلَمُوْنَ ۟ۚ
ನಿಮಗೆ ತಿಳಿದಿರುವ ವಸ್ತುಗಳ ಮೂಲಕ ನಿಮಗೆ ಸಹಾಯ ಮಾಡಿದ ಅಲ್ಲಾಹನನ್ನು ಭಯಪಡಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَمَدَّكُمْ بِاَنْعَامٍ وَّبَنِیْنَ ۟ۚۙ
ಅವನು ನಿಮಗೆ ಜಾನುವಾರುಗಳ ಮತ್ತು ಸಂತಾನಗಳ ಮೂಲಕ ಸಹಾಯ ಮಾಡಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَجَنّٰتٍ وَّعُیُوْنٍ ۟ۚ
ತೋಟಗಳ ಮತ್ತು ಚಿಲುಮೆಗಳ ಮೂಲಕ (ಸಹಾಯ ಮಾಡಿದ್ದಾನೆ)
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنِّیْۤ اَخَافُ عَلَیْكُمْ عَذَابَ یَوْمٍ عَظِیْمٍ ۟ؕ
ನನಗೆ ನಿಮ್ಮ ವಿಚಾರವಾಗಿ ಒಂದು ಮಹಾ ದಿನದ ಯಾತನೆಯ ಭಯವಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالُوْا سَوَآءٌ عَلَیْنَاۤ اَوَعَظْتَ اَمْ لَمْ تَكُنْ مِّنَ الْوٰعِظِیْنَ ۟ۙ
ಅವರು ಹೇಳಿದರು: ನೀನು ಉಪದೇಶ ಮಾಡಿದರೂ, ಮಾಡದಿದ್ದರೂ ನಮ್ಮ ಪಾಲಿಗೆ ಅವೆರೆಡೂ ಸಮವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߛߞߎ߬ߦߊ߬ߟߊ ߟߎ߬
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߊߣߊߘߌߞߊ߲ ߘߟߊߡߌߘߊ - ߓߊߛߌߙ ߡߌߛߎߙߌ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߞߓ. ߛߌ߯ߌߞ߬ ߓߌߛߌߙ ߡߌߛߎ߬ߙߌ߫߸ ߊ߬ ߛߊߞߍ߫ ߘߊ߫ ߙߎ߬ߥߊ߯ߘߎ߫ ߘߟߊߡߌߘߊ ߝߊ߲ߓߊ ߟߊ߫.

ߘߊߕߎ߲߯ߠߌ߲