Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߛ߫   ߟߝߊߙߌ ߘߏ߫:
وَقَالُوْا مَا لَنَا لَا نَرٰی رِجَالًا كُنَّا نَعُدُّهُمْ مِّنَ الْاَشْرَارِ ۟ؕ
ಅವರು ಹೇಳುವರು: “ಇದೇನು? ನಾವು ಕೆಟ್ಟವರೆಂದು ಪರಿಗಣಿಸಿದ್ದ ಆ ಜನರು ನಮಗೆ ಕಾಣಿಸುತ್ತಿಲ್ಲವಲ್ಲ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَتَّخَذْنٰهُمْ سِخْرِیًّا اَمْ زَاغَتْ عَنْهُمُ الْاَبْصَارُ ۟
ನಾವು ಅವರನ್ನು (ತಪ್ಪಾಗಿ) ತಮಾಷೆ ಮಾಡುತ್ತಿದ್ದೆವೋ? ಅಥವಾ ನಮ್ಮ ದೃಷ್ಟಿಯಿಂದ ಅವರು ತಪ್ಪಿಹೋಗಿದ್ದಾರೋ?”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنَّ ذٰلِكَ لَحَقٌّ تَخَاصُمُ اَهْلِ النَّارِ ۟۠
ನರಕವಾಸಿಗಳ ಈ ಜಗಳವು ಸತ್ಯವಾಗಿಯೂ ಸಂಭವಿಸಿಯೇ ತೀರುತ್ತದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قُلْ اِنَّمَاۤ اَنَا مُنْذِرٌ ۖۗ— وَّمَا مِنْ اِلٰهٍ اِلَّا اللّٰهُ الْوَاحِدُ الْقَهَّارُ ۟ۚ
ಹೇಳಿರಿ: “ನಾನೊಬ್ಬ ಮುನ್ನೆಚ್ಚರಿಕೆಗಾರ ಮಾತ್ರ. ಏಕೈಕನು ಮತ್ತು ಸರ್ವಾಧಿಕಾರಿಯಾದ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
رَبُّ السَّمٰوٰتِ وَالْاَرْضِ وَمَا بَیْنَهُمَا الْعَزِیْزُ الْغَفَّارُ ۟
ಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ಅವನು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قُلْ هُوَ نَبَؤٌا عَظِیْمٌ ۟ۙ
ಹೇಳಿರಿ: “ಇದು ಗಂಭೀರ ವಾರ್ತೆಯಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَنْتُمْ عَنْهُ مُعْرِضُوْنَ ۟
ನೀವು ಇದನ್ನು ಕಡೆಗಣಿಸುತ್ತಿದ್ದೀರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
مَا كَانَ لِیَ مِنْ عِلْمٍ بِالْمَلَاِ الْاَعْلٰۤی اِذْ یَخْتَصِمُوْنَ ۟
ಉಪರಿಲೋಕದ ದೇವದೂತರುಗಳು ತರ್ಕಿಸುತ್ತಿದ್ದಾಗ ನನಗೆ ಅವರ (ಸಂಭಾಷಣೆಗಳ) ಬಗ್ಗೆ ಯಾವುದೇ ತಿಳುವಳಿಕೆಯಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِنْ یُّوْحٰۤی اِلَیَّ اِلَّاۤ اَنَّمَاۤ اَنَا نَذِیْرٌ مُّبِیْنٌ ۟
ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರನೆಂದು ಮಾತ್ರ ನನಗೆ ದೇವವಾಣಿ ನೀಡಲಾಗುತ್ತಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِذْ قَالَ رَبُّكَ لِلْمَلٰٓىِٕكَةِ اِنِّیْ خَالِقٌۢ بَشَرًا مِّنْ طِیْنٍ ۟
ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರು‍ಗಳೊಂದಿಗೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನಾನು ಜೇಡಿ ಮಣ್ಣಿನಿಂದ ಒಬ್ಬ ಮನುಷ್ಯನನ್ನು ಸೃಷ್ಟಿಸುವೆನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاِذَا سَوَّیْتُهٗ وَنَفَخْتُ فِیْهِ مِنْ رُّوْحِیْ فَقَعُوْا لَهٗ سٰجِدِیْنَ ۟
ನಾನು ಅವನನ್ನು ರೂಪುಗೊಳಿಸಿ, ನನ್ನ ಆತ್ಮದಿಂದ ಅವನಿಗೆ ಊದಿದಾಗ ನೀವು ಅವನಿಗೆ ಸಾಷ್ಟಾಂಗವೆರಗಿರಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَسَجَدَ الْمَلٰٓىِٕكَةُ كُلُّهُمْ اَجْمَعُوْنَ ۟ۙ
ಆಗ ದೇವದೂತರು‍ಗಳೆಲ್ಲರೂ ಒಟ್ಟಾಗಿ ಸಾಷ್ಟಾಂಗವೆರಗಿದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِلَّاۤ اِبْلِیْسَ ؕ— اِسْتَكْبَرَ وَكَانَ مِنَ الْكٰفِرِیْنَ ۟
ಇಬ್ಲೀಸನ ಹೊರತು. ಅವನು ಅಹಂಕಾರ ತೋರಿದನು ಮತ್ತು ಸತ್ಯನಿಷೇಧಿಗಳಲ್ಲಿ ಸೇರಿದವನಾದನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ یٰۤاِبْلِیْسُ مَا مَنَعَكَ اَنْ تَسْجُدَ لِمَا خَلَقْتُ بِیَدَیَّ ؕ— اَسْتَكْبَرْتَ اَمْ كُنْتَ مِنَ الْعَالِیْنَ ۟
ಅಲ್ಲಾಹು ಕೇಳಿದನು: “ಇಬ್ಲೀಸ್! ನಾನು ನನ್ನ ಕೈಯಿಂದ ಸೃಷ್ಟಿಸಿದವನಿಗೆ ಸಾಷ್ಟಾಂಗವೆರಗದಂತೆ ನಿನ್ನನ್ನು ತಡೆದದ್ದು ಏನು? ನೀನು ಅಹಂಕಾರ ತೋರಿದೆಯಾ? ಅಥವಾ ನೀನು ದರ್ಪ ತೋರುವವರಲ್ಲಿ ಸೇರಿದೆಯಾ?”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ اَنَا خَیْرٌ مِّنْهُ ؕ— خَلَقْتَنِیْ مِنْ نَّارٍ وَّخَلَقْتَهٗ مِنْ طِیْنٍ ۟
ಇಬ್ಲೀಸ್ ಹೇಳಿದನು: “ನಾನೇ ಅವನಿಗಿಂತ ಶ್ರೇಷ್ಠ. ನೀನು ನನ್ನನ್ನು ಅಗ್ನಿಯಿಂದ ಸೃಷ್ಟಿಸಿರುವೆ ಮತ್ತು ಅವನನ್ನು ಜೇಡಿಮಣ್ಣಿನಿಂದ ಸೃಷ್ಟಿಸಿರುವೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ فَاخْرُجْ مِنْهَا فَاِنَّكَ رَجِیْمٌ ۟ۙۖ
ಅಲ್ಲಾಹು ಹೇಳಿದನು: “ಇಲ್ಲಿಂದ ಹೊರಟುಹೋಗು. ನಿಶ್ಚಯವಾಗಿಯೂ ನೀನು ಬಹಿಷ್ಕೃತನಾಗಿರುವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَّاِنَّ عَلَیْكَ لَعْنَتِیْۤ اِلٰی یَوْمِ الدِّیْنِ ۟
ಖಂಡಿತವಾಗಿಯೂ ನನ್ನ ಶಾಪವು ಪ್ರತಿಫಲದ ದಿನದ ತನಕ ನಿನ್ನ ಮೇಲೆ ಇರಲಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ رَبِّ فَاَنْظِرْنِیْۤ اِلٰی یَوْمِ یُبْعَثُوْنَ ۟
ಇಬ್ಲೀಸ್ ಹೇಳಿದನು: “ನನ್ನ ಪರಿಪಾಲಕನೇ! ಅವರನ್ನು ಜೀವ ನೀಡಿ ಎಬ್ಬಿಸುವ ದಿನದವರೆಗೆ ನನಗೆ ಕಾಲಾವಕಾಶ ನೀಡು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ فَاِنَّكَ مِنَ الْمُنْظَرِیْنَ ۟ۙ
ಅಲ್ಲಾಹು ಹೇಳಿದನು: “ಸರಿ, ನೀನು ಕಾಲಾವಕಾಶ ನೀಡಲಾದವರಲ್ಲಿ ಸೇರಿರುವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِلٰی یَوْمِ الْوَقْتِ الْمَعْلُوْمِ ۟
ಆ ನಿಶ್ಚಿತ ಅವಧಿಯ ದಿನದ ತನಕ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قَالَ فَبِعِزَّتِكَ لَاُغْوِیَنَّهُمْ اَجْمَعِیْنَ ۟ۙ
ಇಬ್ಲೀಸ್ ಹೇಳಿದನು: “ನಿನ್ನ ಪ್ರತಿಷ್ಠೆಯ ಮೇಲಾಣೆ! ನಿಶ್ಚಯವಾಗಿಯೂ ನಾನು ಅವರೆಲ್ಲರನ್ನೂ ದಾರಿತಪ್ಪಿಸುವೆನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اِلَّا عِبَادَكَ مِنْهُمُ الْمُخْلَصِیْنَ ۟
ಅವರಲ್ಲಿರುವ ನಿನ್ನ ನಿಷ್ಕಳಂಕ ದಾಸರ ಹೊರತು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߛ߫
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲