Check out the new design

Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur. * - Ishakiro ry'ibisobanuro

PDF XML CSV Excel API
Please review the Terms and Policies

Ibisobanuro by'amagambo Isura: Al Baqarat   Umurongo:
وَاتَّبَعُوْا مَا تَتْلُوا الشَّیٰطِیْنُ عَلٰی مُلْكِ سُلَیْمٰنَ ۚ— وَمَا كَفَرَ سُلَیْمٰنُ وَلٰكِنَّ الشَّیٰطِیْنَ كَفَرُوْا یُعَلِّمُوْنَ النَّاسَ السِّحْرَ ۗ— وَمَاۤ اُنْزِلَ عَلَی الْمَلَكَیْنِ بِبَابِلَ هَارُوْتَ وَمَارُوْتَ ؕ— وَمَا یُعَلِّمٰنِ مِنْ اَحَدٍ حَتّٰی یَقُوْلَاۤ اِنَّمَا نَحْنُ فِتْنَةٌ فَلَا تَكْفُرْ ؕ— فَیَتَعَلَّمُوْنَ مِنْهُمَا مَا یُفَرِّقُوْنَ بِهٖ بَیْنَ الْمَرْءِ وَزَوْجِهٖ ؕ— وَمَا هُمْ بِضَآرِّیْنَ بِهٖ مِنْ اَحَدٍ اِلَّا بِاِذْنِ اللّٰهِ ؕ— وَیَتَعَلَّمُوْنَ مَا یَضُرُّهُمْ وَلَا یَنْفَعُهُمْ ؕ— وَلَقَدْ عَلِمُوْا لَمَنِ اشْتَرٰىهُ مَا لَهٗ فِی الْاٰخِرَةِ مِنْ خَلَاقٍ ۫ؕ— وَلَبِئْسَ مَا شَرَوْا بِهٖۤ اَنْفُسَهُمْ ؕ— لَوْ كَانُوْا یَعْلَمُوْنَ ۟
ಶೈತಾನರು ಸುಲೈಮಾನರ ಆಡಳಿತಕಾಲದಲ್ಲಿ ಪಠಿಸುತ್ತಿದ್ದ ವಿಷಯಗಳನ್ನು ಅವರು ಹಿಂಬಾಲಿಸಿದರು. ಸುಲೈಮಾನ್ ಸತ್ಯನಿಷೇಧಿಯಾಗಿರಲಿಲ್ಲ. ಆದರೆ ಶೈತಾನರು ಸತ್ಯನಿಷೇಧಿಗಳಾಗಿದ್ದರು.[1] ಅವರು ಜನರಿಗೆ ಮಾಟಗಾರಿಕೆಯನ್ನು ಮತ್ತು ಬ್ಯಾಬಿಲೋನಿಯಾದಲ್ಲಿ ಹಾರೂತ್ ಮತ್ತು ಮಾರೂತ್ ಎಂಬ ಎರಡು ದೇವದೂತರಿಗೆ ಅವತೀರ್ಣವಾಗುತ್ತಿದ್ದ ವಿಷಯಗಳನ್ನು ಕಲಿಸುತ್ತಿದ್ದರು. ಆದರೆ, “ನಾವೊಂದು ಪರೀಕ್ಷೆಯಾಗಿದ್ದೇವೆ; ಆದ್ದರಿಂದ ನೀವು ಸತ್ಯನಿಷೇಧಿಗಳಾಗಬೇಡಿ” ಎಂದು ಹೇಳದೆ ಅವರಿಬ್ಬರು (ಹಾರೂತ್ ಮತ್ತು ಮಾರೂತ್) ಯಾರಿಗೂ ಕಲಿಸಿಕೊಡುತ್ತಿರಲಿಲ್ಲ. ಹೀಗೆ ಜನರು ಅವರಿಬ್ಬರಿಂದ ಗಂಡ-ಹೆಂಡತಿಯ ನಡುವೆ ಒಡಕು ಮೂಡಿಸುವ ತಂತ್ರಗಳನ್ನು ಕಲಿಯುತ್ತಿದ್ದರು. ಆದರೆ ಅಲ್ಲಾಹನ ಅಪ್ಪಣೆಯಿಲ್ಲದೆ ಯಾರಿಗೂ ಯಾವುದೇ ತೊಂದರೆ ಮಾಡಲು ಅವರಿಗೆ ಸಾಧ್ಯವಿಲ್ಲ. ಸ್ವತಃ ಅವರಿಗೆ ತೊಂದರೆಯಾಗುವ ಮತ್ತು ಅವರಿಗೆ ಯಾವುದೇ ಪ್ರಯೋಜನ ನೀಡದ ವಿಷಯಗಳನ್ನು ಅವರು ಕಲಿಯುತ್ತಿದ್ದರು. ಅದನ್ನು ಪಡೆದವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲವೆಂದು ಅವರು ದೃಢವಾಗಿ ತಿಳಿದಿದ್ದರು. ಅವರು ಯಾವುದಕ್ಕೆ ತಮ್ಮ ಆತ್ಮಗಳನ್ನು ಮಾರಿಕೊಂಡರೋ ಅದು ಬಹಳ ನಿಕೃಷ್ಟವಾಗಿದೆ. ಅವರು ಅದನ್ನು ತಿಳಿದಿದ್ದರೆ (ಎಷ್ಟು ಚೆನ್ನಾಗಿತ್ತು)!
[1] ಯಹೂದಿಗಳು ಅಲ್ಲಾಹನ ಗ್ರಂಥವನ್ನು ಮತ್ತು ಕರಾರುಗಳನ್ನು ಲೆಕ್ಕಿಸದೆ ಶೈತಾನರ ಹಿಂದೆ ಬಿದ್ದರು. ಅವರು ಶೈತಾನರಿಂದ ಮಾಟಗಾರಿಕೆಯನ್ನು ಕಲಿತದ್ದು ಮಾತ್ರವಲ್ಲದೆ ಪ್ರವಾದಿ ಸುಲೈಮಾನ್ (ಅವರ ಮೇಲೆ ಶಾಂತಿಯಿರಲಿ) ಪ್ರವಾದಿಯಲ್ಲ, ಬದಲಿಗೆ ಅವರೊಬ್ಬ ಮಾಟಗಾರನೆಂದು ಪ್ರಚಾರ ಮಾಡತೊಡಗಿದರು. ಆದರೆ ಪ್ರವಾದಿ ಸುಲೈಮಾನ್ (ಅವರ ಮೇಲೆ ಶಾಂತಿಯಿರಲಿ) ಮಾಟಗಾರಿಕೆ ಮಾಡುತ್ತಿರಲಿಲ್ಲ. ಏಕೆಂದರೆ ಮಾಟಗಾರಿಕೆ ಮಾಡುವುದು ಸತ್ಯನಿಷೇಧವಾಗಿದೆ. ಒಬ್ಬ ಪ್ರವಾದಿ ಸತ್ಯನಿಷೇಧವನ್ನು ಹೇಗೆ ತಾನೇ ಮಾಡಲು ಸಾಧ್ಯ ಎಂದು ಅಲ್ಲಾಹು ಇಲ್ಲಿ ಸ್ಪಷ್ಟಪಡಿಸುತ್ತಾನೆ. ಇನ್ನೊಂದು ವರದಿಯ ಪ್ರಕಾರ ಸುಲೈಮಾನರ ಕಾಲದಲ್ಲಿ ಮಾಟಗಾರಿಕೆಯು ವ್ಯಾಪಕವಾಗಿ ಹರಡಿಕೊಂಡಿತ್ತು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಸುಲೈಮಾನರು ಮಾಟಗಾರಿಕೆಯನ್ನು ಕಲಿಸುವ ಎಲ್ಲಾ ಪುಸ್ತಕಗಳನ್ನು ವಶಪಡಿಸಿಕೊಂಡು ತನ್ನ ಸಿಂಹಾಸನದ ಅಡಿಯಲ್ಲಿ ದಫನ ಮಾಡಿದರು. ಅವರ ಮರಣಾನಂತರ ಶೈತಾನರು ಮಾಟಗಾರರೊಂದಿಗೆ ಸೇರಿಕೊಂಡು ಆ ಪುಸ್ತಕಗಳನ್ನು ಹೊರತೆಗೆದರು. ಅವುಗಳನ್ನು ಜನರಿಗೆ ತೋರಿಸಿ ಸುಲೈಮಾನರು ಆಡಳಿತ ಮಾಡುತ್ತಿದ್ದದ್ದು ಈ ಮಾಟಗಾರಿಕೆಯ ಆಧಾರದಲ್ಲಾಗಿತ್ತು ಎಂದು ಹೇಳಿದರು. ಇದನ್ನು ಕಂಡು ಅತಿರೇಕಿಗಳಾದ ಕೆಲವರು ಸುಲೈಮಾನರನ್ನು (ಅವರ ಮೇಲೆ ಶಾಂತಿಯಿರಲಿ) ಸತ್ಯನಿಷೇಧಿ ಎಂದು ಜರೆದರು.
Ibisobanuro by'icyarabu:
وَلَوْ اَنَّهُمْ اٰمَنُوْا وَاتَّقَوْا لَمَثُوْبَةٌ مِّنْ عِنْدِ اللّٰهِ خَیْرٌ ؕ— لَوْ كَانُوْا یَعْلَمُوْنَ ۟۠
ಅವರು ವಿಶ್ವಾಸವಿಟ್ಟವರು ಮತ್ತು ದೇವಭಯವುಳ್ಳವರಾಗಿದ್ದರೆ, ಅವರಿಗೆ ಅಲ್ಲಾಹನಿಂದ ಉತ್ತಮ ಪ್ರತಿಫಲವು ದೊರೆಯುತ್ತಿತ್ತು. ಅವರು ಅದನ್ನು ತಿಳಿದಿದ್ದರೆ (ಎಷ್ಟು ಚೆನ್ನಾಗಿತ್ತು)!
Ibisobanuro by'icyarabu:
یٰۤاَیُّهَا الَّذِیْنَ اٰمَنُوْا لَا تَقُوْلُوْا رَاعِنَا وَقُوْلُوا انْظُرْنَا وَاسْمَعُوْا ؕ— وَلِلْكٰفِرِیْنَ عَذَابٌ اَلِیْمٌ ۟
ಓ ಸತ್ಯವಿಶ್ವಾಸಿಗಳೇ! ನೀವು (ಪ್ರವಾದಿಯೊಡನೆ) ‘ರಾಇನಾ’ ಎಂದು ಹೇಳಬೇಡಿ.[1] ಬದಲಿಗೆ, ‘ಉನ್‍ಝುರ್‌ನಾ’ ಎಂದು ಹೇಳಿರಿ ಮತ್ತು ಕಿವಿಗೊಟ್ಟು ಕೇಳಿರಿ. ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯಿದೆ.
[1] ರಾಇನಾ ಎಂದರೆ ನಮ್ಮ ಕಡೆಗೆ ಗಮನಹರಿಸಿ ಎಂದರ್ಥ. ಶಿಷ್ಯರಿಗೆ ಮಾತು ಅರ್ಥವಾಗದಿದ್ದರೆ ಈ ಪದವನ್ನು ಹೇಳಿ ಅವರು ಗುರುವಿನ ಗಮನ ಸೆಳೆಯುತ್ತಿದ್ದರು. ಆದರೆ ಯಹೂದಿಗಳು ಈ ಪದವನ್ನು ದ್ವಂದ್ವಾರ್ಥದಲ್ಲಿ ಬಳಸುತ್ತಿದ್ದರು. ಕೆಲವೊಮ್ಮೆ ಅವರು ನಮ್ಮ ಕುರಿಗಳನ್ನು ಕಾಯುವವನು ಎಂಬ ಅರ್ಥದಲ್ಲಿ "ರಾಈನಾ" ಎಂದು ಹೇಳುತ್ತಿದ್ದರು. ಕೆಲವೊಮ್ಮೆ ಅವಿವೇಕಿ ಎಂಬರ್ಥದಲ್ಲಿ "ರಾಇನಾ" ಎಂಬ ಪದವನ್ನು ಬಳಸುತ್ತಿದ್ದರು. ಆದ್ದರಿಂದ ಅಲ್ಲಾಹು ಅದರ ಬದಲಿಗೆ "ಉನ್‌ಝುರ್‌ನಾ" ಎಂಬ ಪದವನ್ನು ಬಳಸಲು ಆದೇಶಿಸಿದನು. ಉನ್‌ಝುರ್‌ನಾ ಎಂದರೆ ನಮ್ಮ ಕಡೆಗೆ ಗಮನ ನೀಡಿರಿ ಎಂದರ್ಥ.
Ibisobanuro by'icyarabu:
مَا یَوَدُّ الَّذِیْنَ كَفَرُوْا مِنْ اَهْلِ الْكِتٰبِ وَلَا الْمُشْرِكِیْنَ اَنْ یُّنَزَّلَ عَلَیْكُمْ مِّنْ خَیْرٍ مِّنْ رَّبِّكُمْ ؕ— وَاللّٰهُ یَخْتَصُّ بِرَحْمَتِهٖ مَنْ یَّشَآءُ ؕ— وَاللّٰهُ ذُو الْفَضْلِ الْعَظِیْمِ ۟
ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಏನಾದರೂ ಒಳಿತು ಅವತೀರ್ಣವಾಗುವುದು ಗ್ರಂಥದವರಲ್ಲಿ ಮತ್ತು ಬಹುದೇವಾರಾಧಕರಲ್ಲಿ ಸೇರಿದ ಸತ್ಯನಿಷೇಧಿಗಳಿಗೆ ಸ್ವಲ್ಪವೂ ಇಷ್ಟವಿಲ್ಲ. ಅಲ್ಲಾಹು ಅವನು ಇಚ್ಛಿಸುವವರಿಗೆ ಅವನ ದಯೆಯಿಂದ ವಿಶೇಷವಾಗಿ ಕರುಣಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯದ ಒಡೆಯನಾಗಿದ್ದಾನೆ.
Ibisobanuro by'icyarabu:
 
Ibisobanuro by'amagambo Isura: Al Baqarat
Urutonde rw'amasura numero y'urupapuro
 
Ibisobanuro bya qoran ntagatifu - Ibisobanuro bya Qur'an Ntagatifu mu rurimi rw'igikanada - Hamza Betur. - Ishakiro ry'ibisobanuro

Yasobanuwe na Muhammad Hamza Batur. Byakosowe bihagarariwe n'ikigo Rowad cy'ubusobanuzi.

Gufunga