Check out the new design

Salin ng mga Kahulugan ng Marangal na Qur'an - Salin sa Wikang Kanarese ni Hamza Batur * - Indise ng mga Salin

PDF XML CSV Excel API
Please review the Terms and Policies

Salin ng mga Kahulugan Surah: Al-Furqān   Ayah:
وَلَا یَاْتُوْنَكَ بِمَثَلٍ اِلَّا جِئْنٰكَ بِالْحَقِّ وَاَحْسَنَ تَفْسِیْرًا ۟ؕ
ಅವರು ನಿಮ್ಮ ಬಳಿಗೆ ಯಾವುದೇ ಉದಾಹರಣೆಯನ್ನು ತಂದರೂ, ನಾವು ಅದರ ನಿಜವಾದ ಉತ್ತರವನ್ನು ಮತ್ತು ಅತ್ಯುತ್ತಮ ವಿವರಣೆಯನ್ನು ಖಂಡಿತ ತರುವೆವು.[1]
[1] ಕುರ್‌ಆನನ್ನು ಹಂತ ಹಂತವಾಗಿ ಇಳಿಸಿರುವುದರ ಹಿಂದಿರುವ ಇನ್ನೊಂದು ಜಾಣ್ಮೆಯೇನೆಂದರೆ, ಸತ್ಯನಿಷೇಧಿಗಳು ಯಾವುದೇ ತರ್ಕದೊಂದಿಗೆ ಬಂದರೂ ಅದಕ್ಕೆ ಕುರ್‌ಆನಿನ ಮೂಲಕವೇ ಸೂಕ್ತ ಮತ್ತು ಸ್ಪಷ್ಟ ಉತ್ತರವನ್ನು ನೀಡಲಾಗುತ್ತದೆ.
Ang mga Tafsir na Arabe:
اَلَّذِیْنَ یُحْشَرُوْنَ عَلٰی وُجُوْهِهِمْ اِلٰی جَهَنَّمَ ۙ— اُولٰٓىِٕكَ شَرٌّ مَّكَانًا وَّاَضَلُّ سَبِیْلًا ۟۠
ಯಾರನ್ನು ಮುಖಗಳ ಮೇಲೆ ನರಕಕ್ಕೆ ಒಟ್ಟುಗೂಡಿಸಲಾಗುತ್ತದೋ ಅವರೇ ಅತಿ ನಿಕೃಷ್ಟ ಸ್ಥಳದಲ್ಲಿರುವವರು ಮತ್ತು ಅತ್ಯಧಿಕ ದಾರಿತಪ್ಪಿದವರು.
Ang mga Tafsir na Arabe:
وَلَقَدْ اٰتَیْنَا مُوْسَی الْكِتٰبَ وَجَعَلْنَا مَعَهٗۤ اَخَاهُ هٰرُوْنَ وَزِیْرًا ۟ۚۖ
ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು ಮತ್ತು ಅವರ ಸಹೋದರ ಹಾರೂನರನ್ನು ಅವರ ಸಹಾಯಕರನ್ನಾಗಿ ಮಾಡಿದೆವು.
Ang mga Tafsir na Arabe:
فَقُلْنَا اذْهَبَاۤ اِلَی الْقَوْمِ الَّذِیْنَ كَذَّبُوْا بِاٰیٰتِنَا ؕ— فَدَمَّرْنٰهُمْ تَدْمِیْرًا ۟ؕ
ನಂತರ ನಾವು ಹೇಳಿದೆವು: “ನಮ್ಮ ವಚನಗಳನ್ನು ನಿಷೇಧಿಸಿದ ಜನರ ಬಳಿಗೆ ಹೋಗಿರಿ.” ನಂತರ ನಾವು ಅವರನ್ನು ಸಂಪೂರ್ಣ ನಾಶ ಮಾಡಿದೆವು.
Ang mga Tafsir na Arabe:
وَقَوْمَ نُوْحٍ لَّمَّا كَذَّبُوا الرُّسُلَ اَغْرَقْنٰهُمْ وَجَعَلْنٰهُمْ لِلنَّاسِ اٰیَةً ؕ— وَاَعْتَدْنَا لِلظّٰلِمِیْنَ عَذَابًا اَلِیْمًا ۟ۚۙ
ನೂಹರ ಜನರನ್ನು ಕೂಡ. ಅವರು ಸಂದೇಶವಾಹಕರನ್ನು ನಿಷೇಧಿಸಿದಾಗ ನಾವು ಅವರನ್ನು ಮುಳುಗಿಸಿ ನಾಶ ಮಾಡಿದೆವು ಮತ್ತು ಅವರನ್ನು ಜನರಿಗೆ ದೃಷ್ಟಾಂತವನ್ನಾಗಿ ಮಾಡಿದೆವು. ನಾವು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
Ang mga Tafsir na Arabe:
وَّعَادًا وَّثَمُوْدَاۡ وَاَصْحٰبَ الرَّسِّ وَقُرُوْنًا بَیْنَ ذٰلِكَ كَثِیْرًا ۟
ಆದ್ ಗೋತ್ರವನ್ನು, ಸಮೂದ್ ಗೋತ್ರವನ್ನು, ಬಾವಿಗಳ ಜನರನ್ನು[1] ಮತ್ತು ಅದರ ಮಧ್ಯೆ ಬದುಕಿದ ಅನೇಕ ತಲೆಮಾರುಗಳನ್ನು ಕೂಡ (ನಾಶ ಮಾಡಿದೆವು).
[1] ಇವರು ಯಾರೆಂಬ ಬಗ್ಗೆ ವ್ಯಾಖ್ಯಾನಕಾರರಿಗೆ ಭಿನ್ನಾಭಿಪ್ರಾಯವಿದೆ. ಕೆಲವರು ಇರುವ ಸೂರ ಬುರೂಜ್‌ನಲ್ಲಿ ವಿವರಿಸಿದ ಹೊಂಡಗಳ ಜನರು ಎಂದು ಹೇಳಿದ್ದಾರೆ.
Ang mga Tafsir na Arabe:
وَكُلًّا ضَرَبْنَا لَهُ الْاَمْثَالَ ؗ— وَكُلًّا تَبَّرْنَا تَتْبِیْرًا ۟
ನಾವು ಅವರೆಲ್ಲರಿಗೂ ಉದಾಹರಣೆಗಳನ್ನು ವಿವರಿಸಿಕೊಟ್ಟಿದ್ದೆವು. ನಂತರ ಅವರೆಲ್ಲರನ್ನೂ ನಾವು ಸರ್ವನಾಶ ಮಾಡಿದೆವು.
Ang mga Tafsir na Arabe:
وَلَقَدْ اَتَوْا عَلَی الْقَرْیَةِ الَّتِیْۤ اُمْطِرَتْ مَطَرَ السَّوْءِ ؕ— اَفَلَمْ یَكُوْنُوْا یَرَوْنَهَا ۚ— بَلْ كَانُوْا لَا یَرْجُوْنَ نُشُوْرًا ۟
ಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ.[1] ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ.
[1] ಅಂದರೆ ಪ್ರವಾದಿ ಲೂತರ (ಅವರ ಮೇಲೆ ಶಾಂತಿಯಿರಲಿ) ಜನರು ವಾಸವಾಗಿದ್ದ ಸದೂಮ್ ನಗರ.
Ang mga Tafsir na Arabe:
وَاِذَا رَاَوْكَ اِنْ یَّتَّخِذُوْنَكَ اِلَّا هُزُوًا ؕ— اَهٰذَا الَّذِیْ بَعَثَ اللّٰهُ رَسُوْلًا ۟
ಅವರು ನಿಮ್ಮನ್ನು ಕಾಣುವಾಗ ನಿಮ್ಮನ್ನು ಒಂದು ತಮಾಷೆಯ ವಸ್ತುವನ್ನಾಗಿ ಮಾಡುತ್ತಾ ಕೇಳುತ್ತಾರೆ: “ಅಲ್ಲಾಹು ಸಂದೇಶವಾಹಕನಾಗಿ ಕಳುಹಿಸಿದ್ದು ಇವನನ್ನೋ?
Ang mga Tafsir na Arabe:
اِنْ كَادَ لَیُضِلُّنَا عَنْ اٰلِهَتِنَا لَوْلَاۤ اَنْ صَبَرْنَا عَلَیْهَا ؕ— وَسَوْفَ یَعْلَمُوْنَ حِیْنَ یَرَوْنَ الْعَذَابَ مَنْ اَضَلُّ سَبِیْلًا ۟
ನಾವು ನಮ್ಮ ದೇವರುಗಳ ವಿಷಯದಲ್ಲಿ ಮನಸ್ಸು ಗಟ್ಟಿ ಮಾಡಿ ನಿಲ್ಲದಿರುತ್ತಿದ್ದರೆ ಇವನು ನಮ್ಮನ್ನು ಅವುಗಳಿಂದ ತಪ್ಪಿಸಿಬಿಡುತ್ತಿದ್ದನು.” ಅವರು ಶಿಕ್ಷೆಯನ್ನು ನೋಡುವಾಗ ಯಾರು ಹೆಚ್ಚು ದಾರಿತಪ್ಪಿದವರೆಂದು ಸ್ಪಷ್ಟವಾಗಿ ತಿಳಿದುಕೊಳ್ಳುವರು.
Ang mga Tafsir na Arabe:
اَرَءَیْتَ مَنِ اتَّخَذَ اِلٰهَهٗ هَوٰىهُ ؕ— اَفَاَنْتَ تَكُوْنُ عَلَیْهِ وَكِیْلًا ۟ۙ
ತನ್ನ ಸ್ವೇಚ್ಛೆಯನ್ನೇ ದೇವರಾಗಿ ಸ್ವೀಕರಿಸಿದವನನ್ನು[1] ನೀವು ನೋಡಿಲ್ಲವೇ? ನೀವೇನು ಅವನ ಹೊಣೆ ವಹಿಸುತ್ತೀರಾ?
[1] ಅಂದರೆ ತನಗೆ ಸರಿಯೆಂದು ಕಾಣುವುದನ್ನು ದೇವರು ಮತ್ತು ಧರ್ಮವಾಗಿ ಸ್ವೀಕರಿಸಿದವನನ್ನು.
Ang mga Tafsir na Arabe:
 
Salin ng mga Kahulugan Surah: Al-Furqān
Indise ng mga Surah Numero ng Pahina
 
Salin ng mga Kahulugan ng Marangal na Qur'an - Salin sa Wikang Kanarese ni Hamza Batur - Indise ng mga Salin

Isinalin ito ni Muhammad Hamza Batur. Binuo ito sa ilalim ng pangangasiwa ng Sentro ng Rowad sa Pagsasalin.

Isara