Check out the new design

قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر * - تەرجىمىلەر مۇندەرىجىسى

PDF XML CSV Excel API
Please review the Terms and Policies

مەنالار تەرجىمىسى سۈرە: ھەدىد   ئايەت:
لَقَدْ اَرْسَلْنَا رُسُلَنَا بِالْبَیِّنٰتِ وَاَنْزَلْنَا مَعَهُمُ الْكِتٰبَ وَالْمِیْزَانَ لِیَقُوْمَ النَّاسُ بِالْقِسْطِ ۚ— وَاَنْزَلْنَا الْحَدِیْدَ فِیْهِ بَاْسٌ شَدِیْدٌ وَّمَنَافِعُ لِلنَّاسِ وَلِیَعْلَمَ اللّٰهُ مَنْ یَّنْصُرُهٗ وَرُسُلَهٗ بِالْغَیْبِ ؕ— اِنَّ اللّٰهَ قَوِیٌّ عَزِیْزٌ ۟۠
ನಿಶ್ಚಯವಾಗಿಯೂ ನಾವು ನಮ್ಮ ಸಂದೇಶವಾಹಕರನ್ನು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಕಳುಹಿಸಿದ್ದೇವೆ ಮತ್ತು ಜನರು ನ್ಯಾಯದಲ್ಲಿ ನಿಲ್ಲುವುದಕ್ಕಾಗಿ ಅವರ ಜೊತೆಗೆ ಗ್ರಂಥ ಮತ್ತು ತಕ್ಕಡಿಯನ್ನು ಅವತೀರ್ಣಗೊಳಿಸಿದ್ದೇವೆ. ನಾವು ಕಬ್ಬಿಣವನ್ನು ಕೂಡ ಇಳಿಸಿದ್ದೇವೆ. ಅದರಲ್ಲಿ ಕಠೋರ ಶಕ್ತಿಯಿದೆ ಮತ್ತು ಜನರಿಗೆ ಪ್ರಯೋಜನಗಳೂ ಇವೆ. ಇವೆಲ್ಲವೂ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ಅದೃಶ್ಯ ರೀತಿಯಲ್ಲಿ ಸಹಾಯ ಮಾಡುವವರು ಯಾರು ಎಂದು ಅಲ್ಲಾಹು ತಿಳಿಯುವುದಕ್ಕಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
ئەرەپچە تەپسىرلەر:
وَلَقَدْ اَرْسَلْنَا نُوْحًا وَّاِبْرٰهِیْمَ وَجَعَلْنَا فِیْ ذُرِّیَّتِهِمَا النُّبُوَّةَ وَالْكِتٰبَ فَمِنْهُمْ مُّهْتَدٍ ۚ— وَكَثِیْرٌ مِّنْهُمْ فٰسِقُوْنَ ۟
ನಾವು ನೂಹ್ ಮತ್ತು ಇಬ್ರಾಹೀಮ‌ರನ್ನು ಕಳುಹಿಸಿದೆವು. ಅವರ ಸಂತಾನ ಪರಂಪರೆಯಲ್ಲಿ ಪ್ರವಾದಿತ್ವ ಮತ್ತು ಗ್ರಂಥವನ್ನು ಸ್ಥಾಪಿಸಿದೆವು. ಅವರಲ್ಲಿ ಸನ್ಮಾರ್ಗ ಪಡೆದವರಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದಾರೆ.
ئەرەپچە تەپسىرلەر:
ثُمَّ قَفَّیْنَا عَلٰۤی اٰثَارِهِمْ بِرُسُلِنَا وَقَفَّیْنَا بِعِیْسَی ابْنِ مَرْیَمَ وَاٰتَیْنٰهُ الْاِنْجِیْلَ ۙ۬— وَجَعَلْنَا فِیْ قُلُوْبِ الَّذِیْنَ اتَّبَعُوْهُ رَاْفَةً وَّرَحْمَةً ؕ— وَرَهْبَانِیَّةَ ١بْتَدَعُوْهَا مَا كَتَبْنٰهَا عَلَیْهِمْ اِلَّا ابْتِغَآءَ رِضْوَانِ اللّٰهِ فَمَا رَعَوْهَا حَقَّ رِعَایَتِهَا ۚ— فَاٰتَیْنَا الَّذِیْنَ اٰمَنُوْا مِنْهُمْ اَجْرَهُمْ ۚ— وَكَثِیْرٌ مِّنْهُمْ فٰسِقُوْنَ ۟
ನಂತರ ಅವರ ಹಿಂದೆಯೇ ನಾವು ನಮ್ಮ ಸಂದೇಶವಾಹಕರನ್ನು ನಿರಂತರವಾಗಿ ಕಳುಹಿಸಿದೆವು. ಮರ್ಯಮರ ಮಗ ಈಸಾರನ್ನೂ ಕಳುಹಿಸಿದೆವು. ನಾವು ಅವರಿಗೆ ಇಂಜೀಲನ್ನು ನೀಡಿದೆವು. ಅವರ ಅನುಯಾಯಿಗಳ ಹೃದಯಗಳಲ್ಲಿ ನಾವು ಅನುಕಂಪ ಮತ್ತು ದಯೆಯನ್ನಿಟ್ಟೆವು. ಅವರು ಸನ್ಯಾಸತ್ವವನ್ನು (ಐಹಿಕ ವಿರಕ್ತಿಯನ್ನು) ಸ್ವಯಂ ಆವಿಷ್ಕರಿಸಿದರು. ನಾವು ಅದನ್ನು ಅವರಿಗೆ ಕಡ್ಡಾಯಗೊಳಿಸಿಲ್ಲ. ಅಲ್ಲಾಹನ ಸಂಪ್ರೀತಿ ಗಳಿಸಲು ಅವರು ಅದನ್ನು ಅಳವಡಿಸಿಕೊಂಡರು. ನಂತರ ಅವರು ಅದನ್ನು ಪಾಲಿಸಬೇಕಾದ ರೀತಿಯಲ್ಲಿ ಪಾಲಿಸಲಿಲ್ಲ. ಆದ್ದರಿಂದ ನಾವು ಅವರ ಪೈಕಿ ಸತ್ಯವಿಶ್ವಾಸಿಗಳಿಗೆ ಅವರ ಪ್ರತಿಫಲವನ್ನು ನೀಡಿದೆವು. ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದರು.
ئەرەپچە تەپسىرلەر:
یٰۤاَیُّهَا الَّذِیْنَ اٰمَنُوا اتَّقُوا اللّٰهَ وَاٰمِنُوْا بِرَسُوْلِهٖ یُؤْتِكُمْ كِفْلَیْنِ مِنْ رَّحْمَتِهٖ وَیَجْعَلْ لَّكُمْ نُوْرًا تَمْشُوْنَ بِهٖ وَیَغْفِرْ لَكُمْ ؕ— وَاللّٰهُ غَفُوْرٌ رَّحِیْمٌ ۟ۙ
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ಅಲ್ಲಾಹು ನಿಮಗೆ ಅವನ ದಯೆಯ ಎರಡು ಪಾಲನ್ನು ನೀಡುವನು.[1] ಅವನು ನಿಮಗೆ ಬೆಳಕನ್ನು ನೀಡುವನು. ಅದರ ಮೂಲಕ ನಿಮಗೆ (ಸರಿಯಾದ ಮಾರ್ಗದಲ್ಲಿ) ನಡೆಯಬಹುದು. ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
[1] ಈ ಎರಡು ಪಾಲು ಸಿಗುವುದು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆಗಮನಕ್ಕೆ ಮೊದಲು ಬೇರೊಬ್ಬ ಪ್ರವಾದಿಯಲ್ಲಿ ಮತ್ತು ನಂತರ ಪ್ರವಾದಿಯವರಲ್ಲಿ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿಶ್ವಾಸವಿಟ್ಟ ಸತ್ಯವಿಶ್ವಾಸಿಗಳಿಗಾಗಿದೆ.
ئەرەپچە تەپسىرلەر:
لِّئَلَّا یَعْلَمَ اَهْلُ الْكِتٰبِ اَلَّا یَقْدِرُوْنَ عَلٰی شَیْءٍ مِّنْ فَضْلِ اللّٰهِ وَاَنَّ الْفَضْلَ بِیَدِ اللّٰهِ یُؤْتِیْهِ مَنْ یَّشَآءُ ؕ— وَاللّٰهُ ذُو الْفَضْلِ الْعَظِیْمِ ۟۠
ಅದೇಕೆಂದರೆ, ಅಲ್ಲಾಹನ ಔದಾರ್ಯದಲ್ಲಿ ಏನನ್ನೂ ವಶದಲ್ಲಿಟ್ಟುಕೊಳ್ಳಲು ಅವರಿಗೆ ಸಾಧ್ಯವಿಲ್ಲ ಮತ್ತು ಔದಾರ್ಯವೆಲ್ಲವೂ ಇರುವುದು ಅಲ್ಲಾಹನ ವಶದಲ್ಲಿ ಮಾತ್ರ—ಅವನು ಇಚ್ಛಿಸುವವರಿಗೆ ಅದನ್ನು ನೀಡುತ್ತಾನೆ ಎಂದು ಗ್ರಂಥದವರು ತಿಳಿಯುವುದಕ್ಕಾಗಿ. ಅಲ್ಲಾಹು ಮಹಾ ಔದಾರ್ಯವಂತನಾಗಿದ್ದಾನೆ.
ئەرەپچە تەپسىرلەر:
 
مەنالار تەرجىمىسى سۈرە: ھەدىد
سۈرە مۇندەرىجىسى بەت نومۇرى
 
قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر - تەرجىمىلەر مۇندەرىجىسى

مۇھەممەد ھەمزە تەرىپىدىن تەرجىمە قىلىنغان. روۋاد تەرجىمە مەركىزىنىڭ رىياسەتچىلىكىدە تەرەققىي قىلدۇرۇلغان.

تاقاش