قرآن کریم کے معانی کا ترجمہ - الترجمة الكنادية * - ترجمے کی لسٹ

XML CSV Excel API
Please review the Terms and Policies

معانی کا ترجمہ آیت: (7) سورت: سورۂ اِسراء
اِنْ اَحْسَنْتُمْ اَحْسَنْتُمْ لِاَنْفُسِكُمْ ۫— وَاِنْ اَسَاْتُمْ فَلَهَا ؕ— فَاِذَا جَآءَ وَعْدُ الْاٰخِرَةِ لِیَسُوْٓءٗا وُجُوْهَكُمْ وَلِیَدْخُلُوا الْمَسْجِدَ كَمَا دَخَلُوْهُ اَوَّلَ مَرَّةٍ وَّلِیُتَبِّرُوْا مَا عَلَوْا تَتْبِیْرًا ۟
ನೀವು ಒಳಿತು ಮಾಡಿದರೆ ಅದು ನಿಮ್ಮ ಒಳಿತಿಗೇ ಆಗಿದೆ. ನೀವು ಕೆಡುಕು ಮಾಡಿದರೆ ಅದರ ಪರಿಣಾಮವನ್ನು ನೀವೇ ಅನುಭವಿಸುತ್ತೀರಿ. ಎರಡನೇ ವಾಗ್ದಾನದ ಸಮಯವು ಬಂದಾಗ, ನಿಮ್ಮ ಮುಖಗಳನ್ನು ವಿರೂಪಗೊಳಿಸಲು ಮತ್ತು ಅವರು ಪ್ರಥಮ ಬಾರಿ ಮಸೀದಿಯನ್ನು ಪ್ರವೇಶಿಸಿದಂತೆ ಎರಡನೇ ಬಾರಿಯೂ ಪ್ರವೇಶಿಸಲು ಹಾಗೂ ನಿಮ್ಮ ಅಧಿಕಾರದಲ್ಲಿರುವ ಎಲ್ಲವನ್ನೂ ಸರ್ವನಾಶ ಮಾಡಲು (ನಾವು ನಮ್ಮ ಬೇರೆ ದಾಸರನ್ನು ಕಳುಹಿಸಿದೆವು).[1]
[1] ಯಹೂದಿಗಳು ಪ್ರವಾದಿ ಝಕರಿಯ್ಯಾರನ್ನು (ಅವರ ಮೇಲೆ ಶಾಂತಿಯಿರಲಿ) ಕೊಂದು ನಂತರ ಈಸಾರನ್ನು (ಯೇಸು — ಅವರ ಮೇಲೆ ಶಾಂತಿಯಿರಲಿ) ಕೂಡ ಕೊಲ್ಲಲು ಸಂಚು ನಡೆಸಿದರು. ಆದರೆ ಅಲ್ಲಾಹು ಅವರ ಕೈಯಿಂದ ಈಸಾರನ್ನು (ಅವರ ಮೇಲೆ ಶಾಂತಿಯಿರಲಿ) ರಕ್ಷಿಸಿದನು. ನಂತರ ಕ್ರಿ. ಶ. 70ರಲ್ಲಿ ಅಲ್ಲಾಹು ರೋಮನ್ ದೊರೆ ಟೈಟಸ್‌ನನ್ನು ಅವರ ವಿರುದ್ಧ ಕಳುಹಿಸಿದನು. ಅವನು ಜೆರೂಸಲೇಂಗೆ ದಾಳಿ ಮಾಡಿ ಯಹೂದಿಗಳ ಒಂದು ದೊಡ್ಡ ಸಂಖ್ಯೆಯನ್ನು ಕೊಂದು ಒಂದು ದೊಡ್ಡ ಸಂಖ್ಯೆಯನ್ನು ಖೈದಿಗಳಾಗಿ ಮಾಡಿದನು. ಅವರ ಆಸ್ತಿಗಳೆಲ್ಲವನ್ನೂ ಕೊಳ್ಳೆ ಹೊಡೆದನು. ಅವರ ಧಾರ್ಮಿಕ ಗ್ರಂಥಗಳನ್ನೆಲ್ಲಾ ಚಿಂದಿ ಮಾಡಿ ಬೈತುಲ್ ಮುಕದ್ದಸ್ ಮತ್ತು ಹೈಕಲ್ ಸುಲೈಮಾನ್ ಗಳನ್ನು ಬಲವಂತವಾಗಿ ವಶಪಡಿಸಿದನು. ಯಹೂದಿಗಳನ್ನು ಶಾಶ್ವತವಾಗಿ ಪ್ಯಾಲಸ್ತೀನ್‌ನಿಂದ ಗಡೀಪಾರು ಮಾಡಿದನು.
عربی تفاسیر:
 
معانی کا ترجمہ آیت: (7) سورت: سورۂ اِسراء
سورتوں کی لسٹ صفحہ نمبر
 
قرآن کریم کے معانی کا ترجمہ - الترجمة الكنادية - ترجمے کی لسٹ

ترجمة معاني القرآن الكريم إلى اللغة الكنادية ترجمها محمد حمزة بتور.

بند کریں